ಚಿರಾಗ್ ಪಾಸ್ವಾನ್ 
ದೇಶ

ನನ್ನ ಹೋರಾಟ ನಿತೀಶ್ ವಿರುದ್ಧ ಮಾತ್ರ, ಕೊನೆಯ ಉಸಿರಿರುವವರೆಗೂ ಮೋದಿ ಅವರೊಂದಿಗೆ ಇರುತ್ತೇನೆ: ಚಿರಾಗ್ ಪಾಸ್ವಾನ್

ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಪಾಟ್ನಾ: ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧ ಮಾತ್ರ, ಆದರೆ ನನ್ನ ಕೊನೆಯ ಉಸಿರಿರುವವರೆಗೂ ಪ್ರಧಾನಿ ಮೋದಿ ಜೊತೆಗಿರುತ್ತೇನೆ ಎಂದು ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಪರ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಇತ್ತಿಚಿಗೆ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಸ್ಮರಿಸಿದರು. ರಾಮ್ ವಿಲಾಸ್ ಪಾಸ್ವಾನ್ ತಮ್ಮ ಜೀವನದ ಕೊನೆಯ ಉಸಿರಿರುವವರೆಗೂ ನನ್ನ ಜೊತೆ ಇದ್ದರು ಎಂದು ಪ್ರಧಾನಿ  ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. 

ಇದೇ ವಿಚಾರಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿರುವ ಚಿರಾಗ್, 'ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ತಮ್ಮ ತಂದೆಯನ್ನು ಸ್ಮರಿಸಿರುವುದಕ್ಕೆ ಧನ್ಯವಾದ ಅರ್ಪಿಸಿರುವ ಪುತ್ರ ಚಿರಾಗ್ ಪಾಸ್ವಾನ್, ನಾನೂ ಕೂಡ ಪ್ರಧಾನಿ ಅವರೊಂದಿಗೆ ನನ್ನ ಜೀವನದ ಕೊನೆಯ ಕ್ಷಣದವರೆಗೂ ಇರುತ್ತೇನೆ ಎಂದು  ಭರವಸೆ ನೀಡಿದರು.

ಪ್ರಧಾನಿ ನಮ್ಮ ತಂದೆಯನ್ನು ನೆನೆದಿರುವುದು ನನಗೆ ಗೌರವದ ವಿಷಯ. ನಾನು ತುಂಬ ಭಾವುಕನಾಗಿದ್ದೇನೆ. ಅಲ್ಲದೇ ಮೋದಿ ಅವರೊಂದಿಗೆ ಗಟ್ಟಿಯಾಗಿ ನಿಲ್ಲುವ ಭರವಸೆಯನ್ನೂ ನೀಡುತ್ತೇನೆ. ನನ್ನ ಹೋರಾಟ ಏನಿದ್ದರೂ ನಿತೀಶ್ ಕುಮಾರ್ ವಿರುದ್ಧವೇ ಹೊರತು ಬಿಜೆಪಿ ವಿರುದ್ಧವಲ್ಲ. ಆದರೆ ಜೆಡಿಯು ಮಿತ್ರ  ಪಕ್ಷವಾಗಿರುವುದರಿಂದ ನನ್ನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಆದರೆ ನಾನು ಮಾತ್ರ ಬಿಜೆಪಿ ವಿರುದ್ಧ ಮಾತನಾಡುವುದಿಲ್ಲ ಎಂದು ಚಿರಾಗ್ ಪಾಸ್ವಾನ್ ಸ್ಪಷ್ಟಪಡಿಸಿದರು. 

ಅಂತೆಯೇ, ನಾನು ಸಿಎಂ ಆದರೆ ನಿತೀಶ್ ಕುಮಾರ್ ರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ನಾನು ಅಧಿಕಾರಕ್ಕೆ ಬಂದರೆ ಸಾತ್ ನಿಶ್ಚೇ (ಏಳು ಪರಿಹಾರಗಳು) ಯೋಜನೆಯಲ್ಲಿ ನಾನು ಹಗರಣಗಳನ್ನು ತನಿಖೆ ಮಾಡುತ್ತೇನೆ ಮತ್ತು ತಪ್ಪಿತಸ್ಥರೆಲ್ಲರನ್ನು ಜೈಲಿಗೆ ಕಳುಹಿಸಲಾಗುತ್ತದೆ.  ಆ ಪಟ್ಟಿಯಲ್ಲಿ ನಿತೀಶ್ ಕುಮಾರ್ ಇದ್ದರೆ ಅವರನ್ನೂ ಸಹ ಎಂದು ಚಿರಾಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT