ದೇಶ

ಬಿಹಾರ ಚುನಾವಣೆ ಕಣದಲ್ಲಿದ್ದ ಜೆಡಿಆರ್ ಪಕ್ಷದ ಅಭ್ಯರ್ಥಿಗೆ ಗುಂಡಿಟ್ಟು ಹತ್ಯೆ!

ಬಿಹಾರದ ​ಶಿಯೋಹಾರ್​​ ಜಿಲ್ಲೆಯ ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಎಎನ್‌ಐ  ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

ಪಾಟ್ನಾ: ಬಿಹಾರದ ​ಶಿಯೋಹಾರ್​​ ಜಿಲ್ಲೆಯ ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಎಎನ್‌ಐ  ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

ಸಿಂಗ್ ಅವರ ಬೆಂಬಲಿಗರು ಎಂದು ಹೇಳಕಾಗಿರುವ ಜನರುಹಲ್ಲೆ ನಡೆಸಿದ್ದಾಗಿ ಪೋಲೀಸರು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗಾಗಿ ಮತಯಾಚನೆ ನಡೆಸುತ್ತಿದ್ದ ವೇಳೆ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ..

 "ಇಬ್ಬರು ಜನರನ್ನು ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ... ಸುಮಾರು ಐದು ರಿಂದ ಆರು ಜನರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ" ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ರಾಕೇಶ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.

ಘಟನೆ ಸಂಬಂಧ ಪೂರ್ಣಾಹಿಯಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT