ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಒಟ್ಟಾರೆ 10 ಕೋಟಿ ಕೋವಿಡ್-19 ಸ್ಯಾಂಪಲ್ ಪರೀಕ್ಷೆ

ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. 

ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ ಮತ್ತು ಸಂಘಟಿತ ಪ್ರಯತ್ನಗಳಿಂದ ದೇಶದಲ್ಲಿ 10,13,82,564 ಜನರನ್ನು ಪರೀಕ್ಷಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಐಸಿಎಂಆರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 12,69,479 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅಕ್ಟೋಬರ್ 23ರವರೆಗೂ 10,13,82,564 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

2020 ರ ಜನವರಿಯಲ್ಲಿ ಪುಣೆಯ ಪ್ರಯೋಗಾಲಯದಲ್ಲಿ ಕೇವಲ ಒಂದು ಪರೀಕ್ಷೆ ನಡೆಸಿದ್ದು, ಇಂದು 4 ಕೋಟಿ ಪರೀಕ್ಷೆಗಳ ಮೈಲಿಗಲ್ಲು ತಲುಪುವಲ್ಲಿ ಭಾರತ ಬಹಳ ದೂರ ಕ್ರಮಿಸಿದೆ. ವಿಸ್ತೃತ ಪ್ರಯೋಗಾಲಯಗಳ ಜಾಲ ಮತ್ತು ಹಲವಾರು ನೀತಿ ಕ್ರಮಗಳ ಮೂಲಕ ದೇಶಾದ್ಯಂತ ಪರೀಕ್ಷಾ ಪ್ರಮಾಣ ಹೆಚ್ಚಾಗುತ್ತಿದೆ. ದೇಶದಲ್ಲಿ 1,576 ಪ್ರಯೋಗಾಲಯಗಳಿದ್ದು, ಇವುಗಳಲ್ಲಿ ಸರ್ಕಾರಿ ವಲಯದ   1,002, ಮತ್ತು  ಖಾಸಗಿ 574 ಪ್ರಯೋಗಾಲಯಗಳು ಸೇರಿವೆ.

ಪರೀಕ್ಷೆ ಪ್ರಮಾಣವನ್ನು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿಸಿರುವುದರಿಂದ ದೃಢಪಟ್ಟ ಪ್ರಕರಣಗಳ ಪ್ರಮಾಣವು ಅಂತಿಮವಾಗಿ ಕುಸಿಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT