ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 53,370 ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೆ ಇಳಿಕೆ

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಎಂದಿನಂತೆ ಶನಿವಾರ ಕೂಡ ಮುಂದುವರೆದಿದ್ದು, ಸತತ 6 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 53,370 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 650 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 1,17,956ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಗಮನಾರ್ಹ ವಿಚಾರವೆಂದರೆ ಒಂದೇ ದಿನ 67,549 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 70,16,046ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,80,680ಕ್ಕೆ ಇಳಿಕೆಯಾಗಿದೆ. 

ಕಳೆದ 5 ದಿನಗಳಿಂದ ದೇಶದಲ್ಲಿ 8 ಲಕ್ಷಕ್ಕಿಂತಲೂ ಕಡಿಮೆ ದಾಖಲಾಗುತ್ತಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 6.80 ಲಕ್ಷಕ್ಕೆ ಇಳಿಕೆಯಾಗಿದೆ. ಈ ಬೆಳವಣಿಗೆಯು ದೇಶದಲ್ಲಿ ಕೊರೋನಾ ಅಬ್ಬರವನ್ನು ಕಡಿಮೆ ಮಾಡುತ್ತಿದೆ ಎಂಬುದನ್ನು ಸೂಚಿಸುತ್ತಿದೆ ಎಂದು ಹೇಳಲಾಗುತ್ತಿದೆ. 

SCROLL FOR NEXT