ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಮಹಾಮಾರಿ ಆರ್ಭಟ: 24 ಗಂಟೆಗಳಲ್ಲಿ 50,129ಕೇಸ್ ಪತ್ತೆ, 90 ದಿನಗಳಲ್ಲಿ ಕನಿಷ್ಟ ಸಂಖ್ಯೆಗಿಳಿದ ಸಾವಿನ ಸಂಖ್ಯೆ

ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ದೈನಂದಿನ ಸಾವಿನ ಸಂಖ್ಯೆ ಕೂಡ ಕಡಿಮೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ 578 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದು 98 ದಿನಗಳಲ್ಲೇ ಕನಿಷ್ಟ ಸಂಖ್ಯೆಯಾಗಿದೆ. ಇದು ದೇಶಹ ಬಹತೇಕ ಕಡೆಗಳಲ್ಲಿ ಸಾಂಕಾರಮಿಕ ಇಳಿಮುಖವಾಗುತ್ತಿರುವುದರ ಸ್ಪಷ್ಟ ಸೂಚನೆಗಳನ್ನು ನೀಡುತ್ತಿದೆ. 

ಈ ಹಿಂದೆ ದಿನವೊಂದರಲ್ಲಿ ಕನಿಷ್ಠ ಸಾವು ಜುಲೈ 18ರಂದು ದಾಖಲಾಗಿತ್ತು. ಸಾವಿನ ಸಂಖ್ಯೆಯ ಈ ವಾರದ ದೈನಿಕ ಸರಾಸರಿ ಸೆಪ್ಟೆಂಬರ್ ಮಧ್ಯಕ್ಕೆ ಹೋಲಿಸಿದರೆ ಅರ್ಧದಷ್ಟಾಗಿದೆ. ಸೆಪ್ಟೆಂಬರ್ 15ರಂದು ದೇಶದಲ್ಲಿ ಇದುವರೆಗಿನ ಗರಿಷ್ಠ ಅಂದರೆ 1275 ಸಾವು ದಾಖಲಾಗಿತ್ತು. ಪ್ರಸ್ತುತ ದೇಶದಲ್ಲಿ ಸಾವಿನ ಸಂಖ್ಯೆ 1,18,534ಕ್ಕೆ ತಲುಪಿದೆ. 

ಈ ನಡುವೆ ದೇಶದ ಒಟ್ಟಾರೆ 78,64,811 ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 62,077 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 70,78,123ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ 6,68,154 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,40,905 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,25,23,469 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!