ದೇಶ

ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣ: ಪರಾರಿಯಾಗಿದ್ದ ಆರೋಪಿ ಬಂಧಿಸಿದ ಎನ್‌ಐಎ

Lingaraj Badiger

ನವದೆಹಲಿ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ, ಪರಾರಿಯಾಗಿದ್ದ ರಾಬಿನ್ಸ್ ಕೆ. ಹಮೀದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ಬಂಧಿಸಿದೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪುಳ ನಿವಾಸಿ ಹಮೀದ್(42) ದುಬೈನಿಂದ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎನ್‌ಐಎ ವಶಕ್ಕೆ ಪಡೆದಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸುಮಾರು 14.82 ಕೋಟಿ ರೂ. ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜುಲೈ 5ರಂದು ವಶಪಡಿಸಿಕೊಂಡಿದ್ದಾರೆ. ಬಳಿಕ ನಾಪತ್ತೆಯಾಗಿದ್ದ ಹಮೀದ್ ನನ್ನು ಎನ್ಐಎ ಇಂದು ಬಂಧಿಸಿದೆ.

ಎರ್ನಾಕುಲಂನ ಎನ್ಐಎ ವಿಶೇಷ ನ್ಯಾಯಾಲಯ ಹಮೀದ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಹಮೀದ್ ಯುಎಇಯಲ್ಲಿ ಎಲೆಕ್ಟ್ರಾನಿಕ್ಸ್ ಅಥವಾ ವಿದ್ಯುತ್ ಉಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳಲ್ಲಿ ಚಿನ್ನ ಕಳ್ಳಸಾಗಾಣೆಗೆ ವ್ಯವಸ್ಥೆ ಮಾಡಿರುವುದಾಗಿ ತಿಳಿದುಬಂದಿದೆ.

SCROLL FOR NEXT