ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ 
ದೇಶ

ಕೋವಿಡ್-19: ಕಳೆದ 13 ದಿನಗಳಲ್ಲಿ 10 ಲಕ್ಷ  ಸೋಂಕಿತರ ಚೇತರಿಕೆ ತೃಪ್ತಿದಾಯಕ ಸಂಕೇತ- ಕೇಂದ್ರ ಆರೋಗ್ಯ ಸಚಿವಾಲಯ

ಕಳೆದ 13 ದಿನಗಳಲ್ಲಿ 10 ಲಕ್ಷ ಕೊರೋನಾ ಸೋಂಕಿತರು ಚೇತರಿಕೆಯಾಗಿರುವುದು ತೃಪ್ತಿದಾಯಕ ಸಂಕೇತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ನವದೆಹಲಿ: ಕಳೆದ 13 ದಿನಗಳಲ್ಲಿ 10 ಲಕ್ಷ ಕೊರೋನಾ ಸೋಂಕಿತರು ಚೇತರಿಕೆಯಾಗಿರುವುದು ತೃಪ್ತಿದಾಯಕ ಸಂಕೇತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಕೇರಳ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದಾಗಿ ಹೇಳಿದರು.

ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ಛತ್ತೀಸ್ ಗಢ ಮತ್ತು ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಶೇ. 58 ರಷ್ಟು ಹೊಸ ಸಾವಿನ ಪ್ರಕರಣ ವರದಿಯಾಗಿರುವುದಾಗಿ ತಿಳಿಸಿದರು.

ಪ್ರಸ್ತುತ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.78 ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ. 90. 62 ರಷ್ಟಾಗಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಉತ್ತಮ ಸಂಕೇತವಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT