ಸಾಂದರ್ಭಿಕ ಚಿತ್ರ 
ದೇಶ

ಕ್ಷೀಣಿಸುತ್ತಿದೆ ಕೊರೋನಾ ಅಬ್ಬರ: ದೇಶಾದ್ಯಂತ 24 ಗಂಟೆಗಳಲ್ಲಿ 36,469 ಹೊಸ ಕೇಸುಗಳು, 488 ಮಂದಿ ಸಾವು

ಭಾರತದಲ್ಲಿ ಕೊರೋನಾ ವೈರಸ್ ಹಾವಳಿ ಕಡಿಮೆಯಾಗುವ ಲಕ್ಷಣ ಕಾಣುತ್ತಿದೆ. ದಿನನಿತ್ಯದ ಸೋಂಕು, ಸಕ್ರಿಯ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಮಾರ್ಚ್ ತಿಂಗಳಲ್ಲಿ ಒಕ್ಕರಿಸಿದ ಕೊರೋನಾ ಏಳು ತಿಂಗಳ ನಂತರ ಇಳಿಕೆಯಾಗುತ್ತಿರುವುದು ಕೊಂಚ ಸಮಾಧಾನಕರ ಸಂಗತಿಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಹಾವಳಿ ಕಡಿಮೆಯಾಗುವ ಲಕ್ಷಣ ಕಾಣುತ್ತಿದೆ. ದಿನನಿತ್ಯದ ಸೋಂಕು, ಸಕ್ರಿಯ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಮಾರ್ಚ್ ತಿಂಗಳಲ್ಲಿ ಒಕ್ಕರಿಸಿದ ಕೊರೋನಾ ಏಳು ತಿಂಗಳ ನಂತರ ಇಳಿಕೆಯಾಗುತ್ತಿರುವುದು ಕೊಂಚ ಸಮಾಧಾನಕರ ಸಂಗತಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 36,469 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಜುಲೈ ಮಧ್ಯಭಾಗದ ನಂತರ ಕಳೆದ ಮೂರು ತಿಂಗಳಲ್ಲಿ ದಿನಂಪ್ರತಿ ಕೇಸುಗಳ ಪ್ರಮಾಣದಲ್ಲಿ ಅತ್ಯಂತ ಕಡಿಮೆ ಈ ಬಾರಿಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36,469 ಹೊಸ ಕೇಸ್ ಗಳು ದಾಖಲಾಗಿತ್ತು, ಮೂರು ತಿಂಗಳ ಬಳಿಕ ಇಷ್ಟು ಪ್ರಮಾಣಗಳಲ್ಲಿ ಪ್ರಕರಣಗಳು ತಗ್ಗುವ ಮೂಲಕ ಸೋಂಕಿತರ ಸಂಖ್ಯೆ 79.46 ಲಕ್ಷವಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 79,46,429ಕ್ಕೆ ತಲುಪಿದ್ದು, ನಿನ್ನೆ ಒಂದೇ ದಿನ 63,842 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ 72,01,070 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 6,25,857 ಸಕ್ರಿಯ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿತ್ಯ ಸಾಯುವವರ ಸಂಖ್ಯೆ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 488 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,19,502ಕ್ಕೆ ತಲುಪಿದೆ.

ಮತ್ತೊಂದು ಗಮನಾರ್ಹ ಸಂಗತಿ ಎಂದರೆ ಸೋಂಕು ಪ್ರಕರಣಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ದಿನನಿತ್ಯದ ಪಾಸಿಟಿವ್ ಕೇಸ್‍ಗಳು ಕಡಿಮೆಯಾಗುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,44,20,894 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ನಿನ್ನೆ ಒಂದೇ ದಿನ 9,58,116 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT