ಸಂಗ್ರಹ ಚಿತ್ರ 
ದೇಶ

ಕಳೆದ 9 ದಿನಗಳಲ್ಲಿ ಭಾರತದಲ್ಲಿ ದಾಖಲೆಯ 1 ಕೋಟಿಗೂ ಹೆಚ್ಚು ಕೋವಿಡ್ ಟೆಸ್ಟ್!

ದೇಶಾದ್ಯಂತ ಕೋವಿಡ್ ಟೆಸ್ಟ್ ದಾಖಲೆಯ ಮಟ್ಟದಲ್ಲಿ ಪರೀಕ್ಷೆಗಲು ನಡೆಯುತ್ತಿದ್ದು ಕೋವಿಡ್ ಮಾಹಾಮಾರಿ ಆರ್ಭಟ ದಿನ ಕಳೆದಂತೆ ಕಡಿಮೆಯಾಗುತ್ತಿದೆ. 

ನವದೆಹಲಿ: ದೇಶಾದ್ಯಂತ ಕೋವಿಡ್ ಟೆಸ್ಟ್ ದಾಖಲೆಯ ಮಟ್ಟದಲ್ಲಿ ಪರೀಕ್ಷೆಗಲು ನಡೆಯುತ್ತಿದ್ದು ಕೋವಿಡ್ ಮಾಹಾಮಾರಿ ಆರ್ಭಟ ದಿನ ಕಳೆದಂತೆ ಕಡಿಮೆಯಾಗುತ್ತಿದೆ. 

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಬರೋಬ್ಬರಿ 11 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಪೈಕಿ 50 ಸಾವಿರ ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಕಳೆದ 9 ದಿನಗಳಲ್ಲೇ ದೇಶದಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಪ್ರತಿದಿನ 15 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಯುವ ಸಾಮರ್ಥ್ಯ ದೇಶಕ್ಕಿದೆ ಎಂದು ಸಚವಾಲಯ ಹೇಳಿದೆ. ಇನ್ನು ದೇಶದಲ್ಲಿ ಕೋವಿಡ್ ಟೆಸ್ಟ್ ಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಅಕ್ಟೋಬರ್ 29ರವರೆಗೂ ದೇಶದಲ್ಲಿ ಪರೀಕ್ಷಾ ಸಾಮರ್ಥ್ಯ ಶೇಕಡ 7.54ರಷ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ಇದೇ ವೇಳೆ ದೇಶದಲ್ಲಿ ಕಳೆದ 9 ದಿನಗಳಲ್ಲಿ ಕೋಟಿಗೂ ಅಧಿಕಾ ಟೆಸ್ಟ್ ಗಳನ್ನು ಮಾಡಲಾಗಿದ್ದು ಸೋಂಕು ಪ್ರಮಾಣ 4.64ರಷ್ಟಕ್ಕೆ ನಿಂತಿದೆ. ದೇಶದಲ್ಲಿ ಒಟ್ಟಾರೆ 6,03,687 ಸಕ್ರೀಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಒಟ್ಟಾರೆ ಸೋಂಕು 80 ಲಕ್ಷಕ್ಕೆ ಏರಿಕೆಯಾಗಿದೆ. ಈ ಪೈಕಿ 73 ಲಕ್ಷ ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ ಒಟ್ಟು 56,480 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video