ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ನನ್ನ ಆರೋಗ್ಯ ಕುರಿತ ಹರಿದಾಡುತ್ತಿರುವ ಸುದ್ದಿಗಳು ಸತ್ಯ: ರಜನಿಕಾಂತ್

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಕಳೆದ ರಾತ್ರಿಯಿಂದ ತಮ್ಮ ಆರೋಗ್ಯ ಕುರಿತು ಹಬ್ಬಿರುವ ಹಲವು ವದಂತಿಗಳಿಗೆ ಟ್ವಿಟ್ಟರ್ ಮೂಲಕ ಅಂತ್ಯವಾಡಿದ್ದಾರೆ. 

ಚೆನ್ನೈ: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಕಳೆದ ರಾತ್ರಿಯಿಂದ ತಮ್ಮ ಆರೋಗ್ಯ ಕುರಿತು ಹಬ್ಬಿರುವ ಹಲವು ವದಂತಿಗಳಿಗೆ ಟ್ವಿಟ್ಟರ್ ಮೂಲಕ ಅಂತ್ಯವಾಡಿದ್ದಾರೆ. 

ರಜನಿಕಾಂತ್ 2011 ರಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು, ಅವರು ಸಿಂಗಪುರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಜನಿಕಾಂತ್ ಹೆಸರಿನಲ್ಲಿ ಪ್ರಕಟವಾದ ಪತ್ರದಲ್ಲಿ ತಿಳಿಸಲಾಗಿದೆ. ಇನ್ನೂ 2016 ರಲ್ಲಿ ಮತ್ತೆ ಸಮಸ್ಯೆ ಉಲ್ಬಣಿಸಿದಾಗ, ಅಮೆರಿಕಾಗೆ  ತೆರಳಿ ಮೂತ್ರ ಪಿಂಡ ಬದಲಾವಣೆ ಮಾಡಿಸಿಕೊಂಡಿದ್ದಾಗಿ ಪತ್ರದಲ್ಲಿ ಬರೆದುಕೊಂಡಿದ್ದಾರೆ. ಆದರೆ, ಪತ್ರದಲ್ಲಿರುವ ಈ ಅಂಶಗಳು ಸತ್ಯ ಎಂದು ತಲೈವಾ ಸ್ಪಷ್ಟಪಡಿಸಿದ್ದಾರೆ.

ಆದರೆ, ಅಭಿಮಾನಿಗಳನ್ನು ಉದ್ದೇಶಿಸಿಸಿ ನಾನು ಬರೆದಿರುವೆ ಎಂದು ಹೇಳಲಾಗುತ್ತಿರುವ ಪತ್ರ ಮಾತ್ರ ನನ್ನದಲ್ಲ ಎಂದು ರಜಿನಿಕಾಂತ್ ಹೇಳಿದ್ದಾರೆ. ರಜನಿ ಮಕ್ಕಳ್ ಮಂದ್ರ ಸದಸ್ಯರೊಂದಿಗೆ ಚರ್ಚಿಸಿ ನಂತರ ರಾಜಕೀಯ ಪಕ್ಷ ಸ್ಥಾಪನೆಗೆ ಸಂಬಂಧಿಸಿದಂತೆ ಅಧಿಕೃತ ಘೋಷಣೆ ಮಾಡುತ್ತೇನೆ ಎಂದು ತಲೈವಾ  ತಿಳಿದ್ದಾರೆ. ಆದರೆ, ರಜನಿಕಾಂತ್ ಹೆಸರಿನಲ್ಲಿ ಹರಿದಾಡಿರುವ ಪತ್ರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿ ಕೊಂಡಿರುವ ಕಾರಣ, ರೋಗ ನಿರೋಧಕ ಶಕ್ತಿ ಕಡಿಮೆಯಿದ್ದು, ಕೊರೊನಾ ಸಮಯದಲ್ಲಿ ರಾಜಕೀಯ ಪಕ್ಷ ಪ್ರಕಟಿಸುವುದು, ಎಲ್ಲರೊಂದಿಗೆ ಸಭೆ ಸೇರುವುದು ಜೀವಕ್ಕೆ ಅಪಾಯಕಾರಿಯಾಗಿದೆ, ಹಾಗಾಗಿ ಪಕ್ಷ  ಘೋಷಣೆಯ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್