ಸುಪ್ರೀಂ ಕೋರ್ಟ್ 
ದೇಶ

ದೆಹಲಿ ಮಾಲಿನ್ಯ: ಕಾರು ಬಿಟ್ಟು, ಸೈಕಲ್‌ ತುಳಿಯುವ ಸಮಯ ಇದು ಎಂದ ಸುಪ್ರೀಂ ಕೋರ್ಟ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ "ಸುಂದರವಾದ ಕಾರುಗಳನ್ನು" ಬಳಸುವುದನ್ನು ನಿಲ್ಲಿಸಿ ಎಲ್ಲರೂ ಸೈಕಲ್ ತುಳಿಯುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ "ಸುಂದರವಾದ ಕಾರುಗಳನ್ನು" ಬಳಸುವುದನ್ನು ನಿಲ್ಲಿಸಿ ಎಲ್ಲರೂ ಸೈಕಲ್ ತುಳಿಯುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ(ಎನ್‌ಸಿಆರ್) ಉಂಟಾಗುವ ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಕೆಲವು ತಜ್ಞರ ಪ್ರಕಾರ ಕೃಷಿ ತ್ಯಾಜ್ಯ ಸುಡುವುದು ಮಾಲಿನ್ಯದ ಮೂಲವಲ್ಲ ಎಂದು ಹೇಳಿದರು.

"ನೀವು ನಿಮ್ಮ ಸುಂದರವಾದ ಕಾರುಗಳ ಬಳಕೆಯನ್ನು ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ. ಆದರೆ ನೀವು ಇದನ್ನು ಇಷ್ಟಪಡುವುದಿಲ್ಲ. ನಾವೆಲ್ಲರೂ ಕಾರು, ಬೈಕ್‌ ಬಳಸುವುದನ್ನು ಬಿಟ್ಟು ಸೈಕಲ್‌ಗಳನ್ನು ಬಳಸಬೇಕು" ಎಂದು ಸಿಜೆಐ ಹೇಳಿದ್ದಾರೆ.

"ಕೆಲವು ತಜ್ಞರು ಅನೌಪಚಾರಿಕವಾಗಿ ನಮಗೆ ತಿಳಿಸಿದ್ದು, ದೆಹಲಿ ಮಾಲಿನ್ಯಕ್ಕೆ ಕೃಷಿ ತ್ಯಾಜ್ಯ ಸುಡುವುದು ಮಾತ್ರವಲ್ಲ, ಬೇರೆ ಕಾರಣಗಳಿಂದಲೂ ಮಾಲಿನ್ಯವಾಗುತ್ತಿದೆ" ಎಂದು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.

ಈ ವೇಳೆ ಮಾಲಿನ್ಯವನ್ನು ನಿಗ್ರಹಿಸುವ ಕುರಿತು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿದ್ದು, ಅದನ್ನು ಈಗಾಗಲೇ ಪ್ರಕಟಿಸಲಾಗಿದೆ ಎಂದು ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT