ಪ್ರಿಯತಮೆಗೆ ಚೂರಿ ಇರಿದ ಯುವಕ
ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಗೆ ಚೂರಿ ಇರಿದಿರುವ ಘಟನೆ ಜಿಲ್ಲೆಯ ಇಲೆಂಡು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಖಮ್ಮಮ್: ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಗೆ ಚೂರಿ ಇರಿದಿರುವ ಘಟನೆ ಜಿಲ್ಲೆಯ ಇಲೆಂಡು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಆರೋಪಿಯು ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಯುವಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ. ನಗರದ ಹೊರವಲಯದಲ್ಲಿ ಮಾತುಕತೆಯ ಸೋಗಿನಲ್ಲಿ ಯುವತಿಯನ್ನು ಆಹ್ವಾನಿಸಿ ಚಾಕುವಿನಿಂದ ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದ್ದ ಆತ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಆತನನ್ನು ಪೊಲೀಸರು ಹಿಡಿದಿದ್ದಾರೆ.
ಮೃತ ಯುವತಿಯನ್ನು ಸೌಜನ್ಯ ಎಂದು ಗುರುತಿಸಲಾಗಿದ್ದು, ಕಳೆದ 6 ತಿಂಗಳಿನಿಂದ ನಡೆಯುತ್ತಿದ್ದ ಪ್ರೇಮದ ಬಗ್ಗೆ ಇಬ್ಬರ ಮನೆಯಲ್ಲೂ ತಿಳಿದಿತ್ತು. ಆದರೆ ಸೌಜನ್ಯ ಸಂದೀಪ್ ಇಂದ ದೂರವಿರುತ್ತಿದ್ದರಿಂದ ಆಕ್ರೋಶಗೊಂಡ ಪಾಗಲ್ ಪ್ರೇಮಿ ಆಕೆಯನ್ನು ಮಾತನಾಡಿಸಲು ನಿರ್ಜನ ಪ್ರದೇಶಕ್ಕೆ ಆಗಮಿಸುವಂತೆ ತಿಳಿಸಿದ್ದಾನೆ.
ಈ ವೇಳೆ ಚಾಕುವಿನಿಂದ ಇರಿದಿದ್ದಾನೆ. ಶರ್ಟ್ ಮೇಲೆ ರಕ್ತದ ಕಲೆಗಳನ್ನು ಕಂಡ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.