ದೇಶ

ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್

Manjula VN

ನವದೆಹಲಿ: ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ದಿನವು ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು ವಿಸ್ತರಿಸಲಿ. ಎಲ್ಲರೂ ಆರೋಗ್ಯದಿಂದ ಮತ್ತು ಖುಷಿಯಿಂದ ಇರಲಿ. ಈದ್‌ ಮುಬಾರಕ್‌! ಎಂದು ಹೇಳಿದ್ದಾರೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತದ ಮತ್ತು ಹೊರ ರಾಷ್ಟ್ರಗಳಲ್ಲಿರುವ ನಮ್ಮ ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು. ಸಮಾಜದ ಒಳಿತಿಗಾಗಿ, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ನಾವೆಲ್ಲರೂ ಅವರ ಬೋಧನೆಗಳನ್ನು ಅನುಸರಿಸೋಣ' ಎಂದು ತಿಳಿಸಿದ್ದಾರೆ. 

ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸೌಹಾರ್ದತೆಯ ಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಎಲ್ಲರಿಗೂ ಪ್ರೇರಣೆ ನೀಡಲಿ ಎಂದು ಹೇಳಿದ್ದಾರೆ. 

ಎಲ್ಲರಿಗೂ ಮಿಲಾದ್‌–ಉನ್–ನಬಿ ದಿನದ ಶುಭಾಶಯಗಳು. ಈ ಹಬ್ಬವು ದೇಶಾದ್ಯಂತ ಶಾಂತಿ, ಸಾಮರಸ್ಯ, ಸಹೋದರತೆ ಮತ್ತು ಸಂತೋಷವನ್ನು ತರಲಿ ಎಂದು ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ. 

SCROLL FOR NEXT