ಜೆಪಿ ನಡ್ಡಾ 
ದೇಶ

ಉಗ್ರರಿಂದ ಹತ್ಯೆಗೀಡಾದ ಕಾಶ್ಮೀರ ಬಿಜೆಪಿ ನಾಯಕರ 'ತ್ಯಾಗ' ವ್ಯರ್ಥವಾಗದು: ಜೆಪಿ ನಡ್ಡಾ

ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಪಾದಿಸಿದ್ದಾರೆ.

ನವದೆಹಲಿ: ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ "ತ್ಯಾಗ" ವ್ಯರ್ಥವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಪ್ರತಿಪಾದಿಸಿದ್ದಾರೆ.

ಇಡೀ ಸಮಾಜವು ದುಃಖಿತ ಕುಟುಂಬಗಳೊಂದಿಗೆ ಇದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಎಂದು ನಡ್ಡಾ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಅಂತಹ ರಾಷ್ಟ್ರೀಯವಾದಿಗಳನ್ನು ಕಳೆದುಕೊಳ್ಳುವುದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.

ಕುಲ್ಗಾಮ್ ಜಿಲ್ಲೆಯ ವೈ ಕೆ ಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳಿಂದ ಫಿಡಾ ಹುಸೇನ್, ಉಮರ್ ಹಜಮ್ ಮತ್ತು ಉಮರ್ ರಶೀದ್ ಬೈಗ್ ಗುಂಡಿನ ದಾಳಿಗೆ ಸಿಕ್ಕಿ ಬಲಿಯಾಗಿದ್ದರು

ಕಳೆದ ಜೂನ್ ತಿಂಗಳಿನಿಂದ ಉಗ್ರರು ಕಣಿವೆ ಪ್ರದೇಶದಲ್ಲಿ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಲೇ ಬಂದಿದ್ದಾರೆ. ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT