ಕೋವಿಡ್-19: ತಮಿಳುನಾಡು ಕೃಷಿ ಸಚಿವ ದೊರೈಕಣ್ಣಾ ಆರೋಗ್ಯ ಸ್ಥಿತಿ ಚಿಂತಾಜನಕ
ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಶನಿವಾರ ತಿಳಿಸಿದೆ.
ಚೆನ್ನೈ: ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಶನಿವಾರ ತಿಳಿಸಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.
ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.