ಸೀ ಪ್ಲೇನ್ ನಲ್ಲಿ ಮೋದಿ 
ದೇಶ

ದೇಶದ ಮೊದಲ ಸೀ ಪ್ಲೇನ್ ನಲ್ಲಿ ಸಂಚರಿಸಿದ ಮೊದಲ ಪ್ರಧಾನಿ ಮೋದಿ

ಗುಜರಾತ್ ನಲ್ಲಿ ಆರಂಭವಾದ ದೇಶದ ಮೊಟ್ಟ ಮೊದಲ ಸೀ ಪ್ಲೇನ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದರು. ಆ ಮೂಲಕ ದೇಶದ ಮೊದಲ ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಮೋದಿ ಭಾಜನರಾದರು.

ಅಹ್ಮದಾಬಾದ್: ಗುಜರಾತ್ ನಲ್ಲಿ ಆರಂಭವಾದ ದೇಶದ ಮೊಟ್ಟ ಮೊದಲ ಸೀ ಪ್ಲೇನ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದರು. ಆ ಮೂಲಕ ದೇಶದ ಮೊದಲ ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಮೋದಿ ಭಾಜನರಾದರು.

ಗುಜರಾತಿನ ಸಬರ್‌ಮತಿ ನದಿ ತೀರದಿಂದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್‌ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು. ಸರ್ದಾರ್‌ ಪಟೇಲ್‌ ಅವರ 146ನೇ ಜನ್ಮ ದಿನದ ನಿಮಿತ್ತ ಈ  ಸೇವೆಯನ್ನು ಆರಂಭಿಸಲಾಗಿದ್ದು, ಇದು ದೇಶದ ಮೊಟ್ಟ ಮೊದಲ ಸೀಪ್ಲೇನ್‌ ವಿಮಾನ ವ್ಯವಸ್ಥೆಯಾಗಿದೆ. 

ಸೀಪ್ಲೇನ್‌ ವಿಮಾನ ಅಹಮದಾಬಾದ್‌ನ ನದಿ ತೀರದಿಂದ 10.15 ನಿಮಿಷಕ್ಕೆ ಹಾರಾಟ ಕೈಗೊಳ್ಳಲಿದ್ದು, 10.45ಕ್ಕೆ ಕೆವಾಡಿಯಾ ತಲುಪಲಿದೆ. ಅಂದರೆ ಕೇವಲ 30 ನಿಮಿಷದಲ್ಲಿ ಕೆವಾಡಿಯಾ ತಲುಪಲಿದೆ. ಕೆವಾಡಿಯಾದ ಸರ್ದಾರ್‌ ಸರೋವರ ಡ್ಯಾಮ್‌ನ ಹಿನ್ನೀರಿನಲ್ಲಿ ವಿಮಾನ ಇಳಿಯಲಿದೆ. 

ಏನಿದು ಸೀಪ್ಲೇನ್‌? 
ಇವು ಲಘು ವಿಮಾನಗಳಾಗಿದ್ದು, ನೀರು ಮತ್ತು ನೆಲದ ಮೇಲಿಂದ ಹಾರಾಟ ಕೈಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನದಲ್ಲಿ 19 ಆಸನಗಳು ಇದ್ದು, 14 ಮಂದಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುವುದು. ಸಬರ್‌ಮತಿ ರಿವರ್‌ಫ್ರಂಟ್‌ ಪ್ರದೇಶದಿಂದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಪ್ರತಿಮೆಗೆ  205 ಕಿ.ಮೀ. ದೂರ ಇದ್ದು, ಒಬ್ಬ ಪ್ರಯಾಣಿಕರಿಗೆ ಟಿಕೆಟ್‌ ದರ ಟಿಕೆಟ್‌ ದರ ಅಂದಾಜು 4,800 ರು. ಇರಲಿದೆ. ಪ್ರತಿ ದಿನ ವಿಮಾನ ಅಹಮದಾಬಾದ್‌ನಿಂದ ಕೆವಾಡಿಯಾಕ್ಕೆ 4 ಬಾರಿ ಮತ್ತು ಕೆವಾಡಿಯಿಂದ ಅಹಮದಾಬಾದ್‌ಗೆ 4 ಬಾರಿ ಸಂಚಾರ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT