ಪ್ರಣಬ್ ಮುಖರ್ಜಿ 
ದೇಶ

'ರಾಷ್ಟ್ರಪತಿಗಳೊಂದಿಗೆ ಮಾತಾಡುತ್ತಿದ್ದೇನೆ ಎಂಬುದನ್ನೇ ಪ್ರಣಬ್ ಮುಖರ್ಜಿ ಮರೆಸುತ್ತಿದ್ದರು'

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ಪ್ರಣಬ್ ನಿಧನದಿಂದಾಗಿ ಭಾರತದ ರಾಜಕೀಯ ಕ್ಷೇತ್ರದಲ್ಲಿ ಶೂನ್ಯ ಭಾವನೆ ಆವರಿಸಿದೆ ಎಂದಿರುವ ಮೋಹನ್ ಭಾಗವತ್, ಅವರ ವ್ಯಕ್ತಿತ್ವವೇ ನಮಗೆಲ್ಲಾ ಮಾರ್ಗದರ್ಶನ ಮಾಡುತ್ತಿತ್ತು ಎಂದು ಹೇಳಿದ್ದಾರೆ.

ಪ್ರಣಬ್ ಅತ್ಯಂತ ಸೌಮ್ಯ ಸ್ವಭಾವದ ಆತ್ಮೀಯ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೇಳಿರುವ ಮೋಹನ್ ಭಾಗವತ್, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಅವರು ನಮ್ಮನ್ನು ಭೇಟಿ ಮಾಡುತ್ತಿದ್ದ ರೀತಿ ಅನನ್ಯ ಎಂದು ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ತಮ್ಮನ್ನು ಅದೆಷ್ಟು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು ಎಂದರೆ, ತಾವು ರಾಷ್ಟ್ರಪತಿಗಳೊಂದಿಗೆ ಮಾತನಾಡುತ್ತಿರುವುದನ್ನೇ ಅವರು ಮರೆಸಿ ಬಿಡುತ್ತಿದ್ದರು ಎಂದು ಭಾಗವತ್ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

ಪ್ರಣಬ್ ಅವರನ್ನು ಭೇಟಿಯಾದಾಗಲೆಲ್ಲಾ ಅವರೊಟ್ಟಿಗೆ ಮಾತನಾಡಲು ಹಲವು ವಿಷಯಗಳಿರುತ್ತಿದ್ದವು. ಮಾತನಾಡುತ್ತಾ ಮಾತನಾಡುತ್ತಾ ನಾವು ಅದೆಷ್ಟು ಆತ್ಮೀಯರಾಗಿ ಬಿಡುತ್ತಿದ್ದೇವು ಎಂದರೆ ಅವರು ರಾಷ್ಟ್ರಪತಿಗಳು ಎಂಬುದೇ ನನಗೆ ಮರೆತು ಹೋಗುತ್ತಿತ್ತು ಎಂದು ಭಾಗವತ್ ವಿವರಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷಗಳ ಜೊತೆ ಅವರು ಎಂದು ರಾಜಕೀಯ ಅಸ್ಪೃಶ್ಯತೆ ತೋರಿರಲಿಲ್ಲ, ಎಲ್ಲಾ ಪಕ್ಷಗಳನ್ನು ಪ್ರಣಬ್ ಮಖರ್ಜಿ ಗೌರವಿಸುತ್ತಿದ್ದರು.  ಆರ್ ಎಸ್ ಎಸ್ ಪರಿವಾರದ ಮಾರ್ಗ ದರ್ಶಕರಾಗಿದ್ದರು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT