ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ 
ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ

ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.  ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ಮೋದಿ...

ನವದೆಹಲಿ: ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.  ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪುಷ್ಪನಮನ ಸಲ್ಲಿಸಿದ್ದಾರೆ. 

ಪ್ರಣಬ್ ಮುಖರ್ಜಿಯವರ ಪಾರ್ಥೀವ ಶರೀರವನ್ನು ಸೇನಾ ಆಸ್ಪತ್ರೆಯಿಂದ 10 ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಪ್ರಣಬ್ ಅವರ ನಿವಾಸಕ್ಕೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ವಾಯುಸೇನೆ ಮುಖ್ಯಸ್ಥ ಆರ್.ಕೆ.ಎಸ್. ಭಡೌರಿಯಾ, ನೌಕಾಪಡೆ ಮುಖ್ಯಸ್ಥ ಕರಂಬಿರ್ ಸಿಂಗ್ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

ಮಾಜಿ ರಾಷ್ಟ್ರಪತಿ ಪ್ರಣಬ್ ಅವರಿಗೆ ಕೋವಿಡ್ 19 ಪಾಸಿಟಿವ್ ಎಂದು ವರದಿ ಬಂದಿತ್ತು. ಮೆದುಳು ಸರ್ಜರಿ ವೇಳೆ ಈ ವರದಿ ಬಂದ ನಂತರ ಅವರು ಕೋಮಾಕ್ಕೆ ಜಾರಿದ್ದರು. ಕೆಲವು ವಾರಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಆಗಸ್ಟ್ 30, 2020) ನಿಧನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್