ತಮಿಳುನಾಡಿನಲ್ಲಿ ಸೆ.7ರಿಂದ ಅಂತರ್ ಜಿಲ್ಲಾ ಬಸ್ ಸೇವೆ, ಪ್ಯಾಸೆಂಜರ್ ರೈಲು ಸಂಚಾರ ಆರಂಭ
ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಂತರ ತಮಿಳುನಾಡಿನಲ್ಲಿ ಮಂಗಳವಾರದಿಂದ ಬಸ್ ಸೇವೆ ಪುನಾರಂಭಗೊಂಡಿದ್ದು, ಸೆಪ್ಟೆಂಬರ್ 7ರಿಂದ ಅಂತರ್ ಜಿಲ್ಲಾ ಹಾಗೂ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ.
ಚೆನ್ನೈ: ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಂತರ ತಮಿಳುನಾಡಿನಲ್ಲಿ ಮಂಗಳವಾರದಿಂದ ಬಸ್ ಸೇವೆ ಪುನಾರಂಭಗೊಂಡಿದ್ದು, ಸೆಪ್ಟೆಂಬರ್ 7ರಿಂದ ಅಂತರ್ ಜಿಲ್ಲಾ ಹಾಗೂ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ.
ತಮಿಳುನಾಡಿನ ಒಳಗಡೆಯೇ ಅಂತರ್ ಜಿಲ್ಲಾ ಬಸ್ ಸಂಚಾರ ಹಾಗೂ ಪ್ಯಾಸೆಂಜರ್ ರೈಲು ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಹೇಳಿದ್ದಾರೆ.
ತಮಿಳುನಾಡಿನಲ್ಲಿ ನಿನ್ನೆಯಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್(ಎಂಟಿಸಿ) ಸಂಚಾರ ಆರಂಭವಾಗಿದೆ. ಇದೀಗ ಅಂತರ್ ಜಿಲ್ಲಾ ಸಂಚಾರಕ್ಕೂ ಅನುಮತಿ ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.