ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,72,179 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,72,179 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.2ರವರೆಗೂ 4,55,09,380 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಈವರೆಗೂ ಸೋಂಕಿತರ ಸಂಖ್ಯೆ 37,69,524ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ.