ದೇಶ

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ

Lingaraj Badiger

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

ಕಳೆದ ಫೆಬ್ರವರಿಯಲ್ಲಿ ಉತ್ತರ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮಾಮ್ ಅವರನ್ನು ಬಂಧಿಸಲಾಗಿತ್ತು. ಆರೋಪಿಯ  ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಇಮಾಮ್ ಪರ ವಕೀಲ ಅಹಮ್ಮದ್ ಇಬ್ರಾಹಿಂ ಅವರು ತಿಳಿಸಿದ್ದಾರೆ.


ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹ ಹೇಳಿಕೆ ಆರೋಪದ ಮೇರೆಗೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

SCROLL FOR NEXT