ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ 
ದೇಶ

ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ, ಸ್ಫೋಟದಲ್ಲಿ 2 ಸಾವು!

ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ ಸಂಭವಿಸಿದ್ದು, ಕೈಗಾರಿಕಾ ಎಸ್ಟೇಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ನವದೆಹಲಿ: ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ ಸಂಭವಿಸಿದ್ದು, ಕೈಗಾರಿಕಾ ಎಸ್ಟೇಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ವಿಜಯವಾಡದ ಸುರಂಪಲ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಜಯರಾಜ್ ಎಂಟರ್ ಪ್ರೈಸಸ್ ನಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ ಕೋಟೇಶ್ವರ ರಾವ್ ಮತ್ತು ಮಗ ಚಿನ್ನಾ ರಾವ್ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಇಬ್ಬರೂ ಕೈಗಾರಿಕಾ ಪ್ರದೇಶದ ಸ್ಕ್ರ್ಯಾಪ್ ಖರೀದಿ ಮಾಡಲು ತೆರಳಿದ್ದರು ಎನ್ನಲಾಗಿದೆ. ಜಯರಾಜ್ ಎಂಟರ್ ಪ್ರೈಸಸ್ ನಲ್ಲಿ ಕೆಲ ಕೆಲಸಗಾರರು ಕೆಮಿಕಲ್ ಡ್ರಮ್ ಗಳನ್ನು ಆಟೋಗೆ ತುಂಬುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಕೋಟೇಶ್ವರ ರಾವ್ ಮತ್ತು  ಚಿನ್ನಾ ರಾವ್ ಮೃತಪಟ್ಟಿದ್ದಾರೆ.

ಸ್ಫೋಟದ ರಭಸಕ್ಕೆ ಅಲ್ಲಿದ್ದ ಶೆಡ್ ನ ರೂಫ್ ಗಳು ಹಾರಿಹೋಗಿದ್ದು, ಅಲ್ಲಿದ್ದ ಕಾರ್ಮಿಕರ ಪೈಕಿ ಹಲವು ಕಾರ್ಮಿಕರು ಕೂಡ ಚದುರಿ ಹೋಗಿದ್ದು, 50 ಮೀಟರ್ ಗಳ ವರೆಗೂ ಹಾರಿ ಹೋಗಿದ್ದಾರೆ. ಅಲ್ಲದೆ ಹಲವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎನ್ ಡಿಆರ್ ಎಫ್ ಸಿಬ್ಬಂದಿ ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT