ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ಕಟ್, ಡಿಬಿಟಿ ವರ್ಗಾವಣೆಯಿಲ್ಲ
ಜಾಗತಿಕವಾಗಿ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಳಿತವಿರುವುದರಿಂದ ದೇಶೀಯ ಅಡುಗೆ ಅನಿಲ ಸಬ್ಸಿಡಿಯನ್ನು ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ.
ನವದೆಹಲಿ: ಜಾಗತಿಕವಾಗಿ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಳಿತವಿರುವುದರಿಂದ ದೇಶೀಯ ಅಡುಗೆ ಅನಿಲ ಸಬ್ಸಿಡಿಯನ್ನು ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ.
ಇನ್ನು ಮುಂದೆ ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿಯಲ್ಲಿ ಸಬ್ಸಿಡಿಯನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದಿಲ್ಲ ಎನ್ನಲಾಗಿದೆ.
ವಾಸ್ತವವಾಗಿ, ಈ ಹಣಕಾಸಿನ ಆರಂಭದಿಂದ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಅಡುಗೆ ಅನಿಲದ ನಡುವಿನ ಬೆಲೆಯ ಅಂತರವು
ಕಡಿಮೆಯಾಗುತ್ತಿರುವುದರಿಂದ,ಸರ್ಕಾರ ಕಳೆದ ನಾಲ್ಕು ತಿಂಗಳುಗಳಿಂದ ಯಾವುದೇ ಫಲಾನುಭವಿಗಳ ಖಾತೆಗಳಿಗೆ ಯಾವುದೇ
ನಗದು ವರ್ಗಾವಣೆ ಮಾಡದಿರುವ ಬಗ್ಗೆ ಗ್ರಾಹಕರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ. ದೇಶದಲ್ಲಿ 27 ಕೋಟಿ ಎಲ್ ಪಿಜಿ ಗ್ರಾಹಕರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.