ದೇಶ

ಒಪಿಡಿ ಸೇವೆ ಸ್ಥಗಿತ ಇಲ್ಲ, ಯಥಾ ಪ್ರಕಾರ ಮುಂದುವರಿಕೆ: ದೆಹಲಿಯ ಏಮ್ಸ್ ಆಸ್ಪತ್ರೆ ಸ್ಪಷ್ಟನೆ

Sumana Upadhyaya

ನವದೆಹಲಿ: ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಸೇವೆ ಯಥಾ ಪ್ರಕಾರ ಮುಂದುವರಿಯುತ್ತದೆ ಎಂದು ಆಸ್ಪತ್ರೆ ಹೇಳಿಕೆ ಮೂಲಕ ಸ್ಪಷ್ಟಪಡಿಸಿದೆ.

ಎರಡು ವಾರಗಳವರೆಗೆ ತಾತ್ಕಾಲಿಕವಾಗಿ ಆಸ್ಪತ್ರೆಯ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ನಿನ್ನೆ ಸುತ್ತೋಲೆ ಹೊರಡಿಸಿತ್ತು. ಆದರೆ ಇದೀಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಒಪಿಡಿ ಸೇವೆ ಯಥಾರೀತಿ ಮುಂದುವರಿಯಲಿದೆ ಎಂದು ಹೇಳಿದೆ.

SCROLL FOR NEXT