ದೇಶ

ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸುವ ಅಗತ್ಯ ಇಲ್ಲ: ಕೇಂದ್ರ ಸ್ಪಷ್ಟನೆ

Lingaraj Badiger

ನವದೆಹಲಿ: ಒಬ್ಬರೇ ಕಾರು ಚಾಲನೆ ಮಾಡುವವರು ಮಾಸ್ಕ್ ಧರಿಸುವ ಅಗತ್ಯ ಇಲ್ಲ ಮತ್ತು ಮಾಸ್ಕ್ ಧರಿಸದಿದ್ದ ದಂಡ ವಿಧಿಸುವಂತಿಲ್ಲ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ.

ಕಾರಿನಲ್ಲಿ ಒಬ್ಬರೇ ಹೋಗುವಾ ಮಾಸ್ಕ್ ಧರಿಸುವುದು ಕಡ್ಡಾಯ, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರದ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್ ನಿರ್ವಹಣೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಒಂದು ಗುಂಪಿನಲ್ಲಿ ವ್ಯಾಯಾಮ ಮಾಡುವ ಜನರು ಮಾಸ್ಕ್ ಗಳನ್ನು ಧರಿಸಬೇಕು ಮತ್ತು ಸಾಮಾಜಿಕ ದೂರವಿಡುವ ನಿಯಮಗಳನ್ನು ಪಾಲಿಸಬೇಕು. ಆದರೆ ವಾಹನದಲ್ಲಿ ಒಬ್ಬರೇ ಇರುವವರಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದಿದ್ದಾರೆ.

ಮುಖ್ಯವಾಗಿ ದೆಹಲಿಯಲ್ಲಿ ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸದವರಿಗೆ ಪೊಲೀಸರು ಚಲನ್‌ಗಳನ್ನು ವಿತರಿಸುವ ಅಥವಾ ದಂಡ ಕೇಳುವ ಹಲವಾರು ನಿದರ್ಶನಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯ ಈ ಸ್ಪಷ್ಟೀಕರಣ ನೀಡಿದ್ದಾರೆ.

SCROLL FOR NEXT