ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,69,765 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,69,765 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶುಕ್ರವಾರ ಮಾಹಿತಿ ನೀಡಿದೆ.
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,69,765 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶುಕ್ರವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 11,69,765 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.3ರವರೆಗೂ 4,66,79,145 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಇನ್ನು ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 83,341 ಮಂದಿಯಲ್ಲಿ ವೈರಸ್ ತಗಲಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,36,748ಕ್ಕೆತಲುಪಿದೆ. ಅಲ್ಲದೆ 24 ಗಂಟೆಗಳಲ್ಲಿ 1,096 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ 63,498ಕ್ಕೆ ಏರಿಕೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.