ಶೋವಿಕ್ ಚಕ್ರವರ್ತಿ-ರಿಯಾ 
ದೇಶ

ಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ. 

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ. 

ಮುಂಬೈನ ಜುಹು ತಾರಾ ರಸ್ತೆಯಲ್ಲಿರುವ ರಿಯಾ ಮನೆಯ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸತತ ಶೋಧಕಾರ್ಯ ನಡೆಸಿದ ಅಧಿಕಾರಿಗಳು ನಂತರ ಶೋವಿಕ್ ಮತ್ತು ಸ್ಯಾಮ್ಯುಯೆಲ್ ರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. 

ಸುದೀರ್ಘ ವಿಚಾರಣೆ ಬಳಿಕ ಎನ್‌ಸಿಬಿ ಶೋಯಿಕ್ ಮತ್ತು ಮಿರಾಂಡಾನನ್ನು ಬಂಧಿಸಿದೆ ಎಂದು ಎನ್‌ಸಿಬಿ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದರು.

ಜೂನ್ 14ರಂದು ಸುಶಾಂತ್ ಮೃತದೇಹ ಮುಂಬೈನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿತ್ತು. ಅಂದು ಮುಂಬೈ ಪೊಲೀಸರು ಇದು ಆತ್ಮಹತ್ಯೆ ಪ್ರಕರಣ ಎಂದು ತೀರ್ಮಾನಿಸಿದ್ದರು. ಸುಶಾಂತ್ ಅವರ ಜೀವನವನ್ನು ಕೊನೆಗೊಳಿಸಲು ಏನೆಲ್ಲಾ ಕಾರಣಗಳಿರಬಹುದು ಎಂಬುದರ ಬಗ್ಗೆ ತನಿಖೆ ನಡೆಸಿದ್ದರು. 

ನಂತರ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ತೀವ್ರ ಚರ್ಚೆಗಳು ನಡೆದಿದ್ದರಿಂದ ಕೊನೆಗೆ ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಇನ್ನು ಸುಶಾಂತ್ ಸಾವು ಪ್ರಕರಣದಲ್ಲಿ ಡ್ರಗ್ಸ್ ಮಾಫಿಯಾ ಕೈವಾಡ ಇದೆ ಎಂಬ ಮಾತುಗಳು ಕೇಳಿಬಂದಿತ್ತು. ಈ ಸಂಬಂಧ ಎನ್ಸಿಬಿ ತನಿಖೆಗೆ ಇಳಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!