ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಭಾರತೀಯ ಸೇನೆ
Vishwanath S
Updated On : 4 Sept 2020, 11:07 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

ಈ ಎನ್‌ಕೌಂಟರ್‌ನಲ್ಲಿ ಸೇನಾಧಿಕಾರಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಭದ್ರತಾ ಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟನ್ ಪ್ರದೇಶದ ಯೆಡಿಪೊರಾದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Advertisement

ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿತು ಎಂದು ಅವರು ಹೇಳಿದರು.

ಗುಂಡಿನ ಕಾಳಗದಲ್ಲಿ ಸೇನೆಯ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಯನ್ನು ಇಲ್ಲಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಗಾಯಗೊಂಡ ಸೇನಾಧಿಕಾರಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement