ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 86,432 ಕೇಸ್ ಪತ್ತೆ, 40 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಶನಿವಾರ ಸಾರ್ವಕಾಲಿಕ ದಾಖಲೆಯ 86,432 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಕೊರೋನಾ ತವರು ಚೀನಾದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ದಾಖಲಾದ (85, 102) ಪ್ರಕರಣಗಳಿಂತಲೂ ಹೆಚ್ಚು ಎನ್ನುವುದು ಗಮನಾರ್ಹ ವಿಚಾರವಾಗಿದೆ. 

ನವದೆಹಲಿ: ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಶನಿವಾರ ಸಾರ್ವಕಾಲಿಕ ದಾಖಲೆಯ 86,432 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಕೊರೋನಾ ತವರು ಚೀನಾದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ದಾಖಲಾದ (85, 102) ಪ್ರಕರಣಗಳಿಂತಲೂ ಹೆಚ್ಚು ಎನ್ನುವುದು ಗಮನಾರ್ಹ ವಿಚಾರವಾಗಿದೆ. 

ದೇಶದಲ್ಲಿ ಒಂದೇ ದಿನ 86,432 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿ 40,23,179ಕ್ಕೆ ತಲುಪಿದೆ. 

ಇನ್ನು 40,23,179 ಲಕ್ಷ ಪ್ರಕರಣಗಳೊಂದಿಗೆ ವಿಶ್ವದಲ್ಲಿ 2ನೇ ಸ್ಥಾನದಲ್ಲಿರುವ ಬ್ರೆಜಿಲ್ ರಾಷ್ಟ್ರವನ್ನು ಭಾರತ ಶೀಘ್ರದಲ್ಲೇ ಹಿಂದಿಕ್ಕುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಇದೇ ವೇಳೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1089 ಮಂದಿ ಸಾವಿಗೀಡಾಗಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 69,561ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

40,23,179 ಲಕ್ಷ ಮಂದಿ ಸೋಂಕಿತರ ಪೈಕಿ 31,07,223 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,46,395 ರಷ್ಟು ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,59,346 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 10,59,346 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 10,59,346 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.4ರವರೆಗೂ 4,77,38,491 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್