ಕಂಗನಾ 
ದೇಶ

ಕಂಗನಾ ವಿರುದ್ಧ ಕ್ರಮ ಕೈಗೊಳ್ಳಲು ಸದನ ನಿರ್ಣಯಕ್ಕೆ ಶಿವಸೇನಾ ಶಾಸಕ ಆಗ್ರಹ

ನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಮುಂಬೈ: ನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ನಟಿ ಕಂಗನಾ ಮಹಾರಾಷ್ಟ್ರ ಮತ್ತು ಮುಂಬೈ ಬಗ್ಗೆ ಟ್ವೀಟ್ ಮೂಲಕ "ಅಪಚಾರ" ಮಾಡುತ್ತಿದ್ದಾರೆ ಎಂದು ಶಿವಸೇನಾ ಶಾಸಕ ಆರೋಪಿಸಿದ್ದಾರೆ.

ಈ ಸಂಬಂಧ ನಾನು ಡೆಪ್ಯೂಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರ ಬರೆದಿದ್ದು, ಅವರು "24 ಗಂಟೆಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವರದಿ ಸಲ್ಲಿಸುವಂತೆ ರಾಜ್ಯ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ನಿರ್ದೇಶನ ನೀಡಿದ್ದಾರೆ" ಎಂದು ಸರ್ನಾಯಕ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ನಟಿ ಮುಂಬೈಯನ್ನು "ತಾಲಿಬಾನ್" ಗೆ ಹೋಲಿಸಿದ್ದಾರೆ ಎಂದು ಶಾಸಕರು ದೂರಿದ್ದಾರೆ.

"ನಟಿ ಕಂಗನಾ ರನೌತ್ ಅವರು ಮುಂಬೈಯನ್ನು ಪಿಒಕೆ(ಪಾಕಿಸ್ತಾನ ಆಕ್ರಮಿತ ಕಾಶ್ಮೀರ)ಗೆ ಹೋಲಿಸಿದ್ದರು ಮತ್ತು ತಾನು ಮುಂಬೈ ಪೊಲೀಸರನ್ನು ನಂಬುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!