ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಇದೂವರೆಗೆ 5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಭಾರತದಲ್ಲಿ ಇದೂವರೆಗೂ 5 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಇದೂವರೆಗೂ 5 ಕೋಟಿಗೂ ಹೆಚ್ಚು ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ತಿಳಿಸಿದೆ. 

ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಸೆಪ್ಟೆಂಬರ್7ರವರೆಗೂ 5,06,50,128 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 10,98,621 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,809 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇನ್ನು ನಿನ್ನೆ ಒಂದೇ ದಿನ 1,133 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 72,775ಕ್ಕೆ ಏರಿಕೆಯಾಗಿದೆ. 

ಒಂದೇ ದಿನ 75,809 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 42,80,423 ಏರಿಕೆಯಾಗಿದೆ. 42,80,423 ಮಂದಿ ಸೋಂಕಿತರ ಪೈಕಿ 33,23,951 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 8,83,697  ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ