ಯಶಸ್ 
ದೇಶ

ಡ್ರಗ್ಸ್ ದಂಧೆ ಪ್ರಕರಣ: ಎಸ್ಕೇಪ್ ಆದ ಬೆಂಗಳೂರು ಕಾಂಗ್ರೆಸ್ ಕಾರ್ಪೋರೇಟರ್ ಪುತ್ರ - ಹುಡುಕಾಟದಲ್ಲಿ ಎನ್ ಸಿಬಿ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್  ಪುತ್ರನೋರ್ವ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಈಗಾಗಲೇ ನೋಟಿಸ್ ನೀಡಿತ್ತು.

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್  ಪುತ್ರನೋರ್ವ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಈಗಾಗಲೇ ನೋಟಿಸ್ ನೀಡಿತ್ತು.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಕೇಶವಮೂರ್ತಿ ಅವರ ಪುತ್ರ ಯಶಸ್ ಅವರಿಗೆ ಎನ್ ಸಿಬಿ ನೋಟಿಸ್ ನೀಡಿತ್ತು.  ಆದರೆ, ಇದೂವರೆಗೂ ಯಶಸ್ ವಿಚಾರಣೆಗೆ ಹಾಜರಾಗಿಲ್ಲ.

ಈ ಕುರಿತು ಬೆಂಗಳೂರು ಎನ್ ಸಿಬಿ ಮುಖ್ಯಸ್ಥ ಅಮಿತ್ ಗವಾಟೆ ಪ್ರತಿಕ್ರಿಯಿಸಿ, ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ  ಕಾರ್ಪೋರೇಟರ್ ಕೇಶವಮೂರ್ತಿ ಅವರ ಪುತ್ರ ಯಶಸ್ ಅವರಿಗೆ ಎನ್ ಸಿಬಿಯಿಂದ ನೋಟಿಸ್ ನೀಡಲಾಗಿತ್ತು. 

ಆದರೆ, ಇದುವರೆಗೂ ಯಶಸ್ ವಿಚಾರಣೆಗೆ ಹಾಜರಾಗಿಲ್ಲ‌. ಆದ್ದರಿಂದ ಯಶಸ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿದೆ ಎಂಬುದು ಪತ್ತೆಯಾದ ನಂತರ ನಾರ್ಕೋಟಿಕ್ಸ್ ಕಂಟ್ರೋಲರ್ ಬ್ಯೂರೋ(ಎನ್ಸಿಬಿ) ಅಖಾಡಕ್ಕೆ ಇಳಿದಿತ್ತು. 

ಮುಂಬೈನ ಡ್ರಗ್ ಪೆಡ್ಲರ್ ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ. ಮೊಹಮ್ಮದ್ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಮೊಹಮ್ಮದ್ ನ ವಿಚಾರಣೆ ವೇಳೆ ಯಶಸ್ ಹೆಸರು ಹೇಳಿರುವುದರಿಂದ ಎನ್ ಸಿಬಿ ಯಶಸ್ ಗೆ ನೋಟಿಸ್ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT