ಕೊರೋನಾ ಆರ್ಭಟ 
ದೇಶ

ಲಕ್ಷಣಗಳಿದ್ದು, ಪರೀಕ್ಷೆ ವೇಳೆ ನೆಗೆಟಿವ್ ಬಂದಿರುವವರನ್ನು ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ನವದೆಹಲಿ: ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಗುರುವಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದ್ದು, ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ. ಯಾವುದೇ ಕಾರಣಕ್ಕೂ ಸೋಂಕಿತ ವ್ಯಕ್ತಿ  ಚಿಕಿತ್ಸೆ ಪಡೆಯದೇ ಸಮಾಜದಲ್ಲಿ ತಿರುಗುವಂತಿಲ್ಲ. ಆತನಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿದೆ. ಸೋಂಕು ತಡೆಯುವ ಈ ಕಾರ್ಯದಲ್ಲಿ ಯಾರನ್ನೂ ಕೂಡ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದೆ.

ಐಸಿಎಂಆರ್ ಮಾರ್ಗದರ್ಶನದಂತೆ ಕೆಲವು ದೊಡ್ಡ ರಾಜ್ಯಗಳಲ್ಲಿ, ರಾಪಿಡ್ ಆಂಟಿಜೆನ್ ಟೆಸ್ಟ್ (ರಾಟ್) ಪರೀಕ್ಷೆ ನಡೆಯುತ್ತಿಲ್ಲ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮತ್ತು ಆರ್-ಟಿಪಿಸಿಆರ್ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದ ಎರಡು ಮೂರು ದಿನಗಳಲ್ಲಿ ರೋಗಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ರೋಗ ಲಕ್ಷಣಗಳು  ಇರುವವರು ಕೂಡ ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಬೇಕು ಎಂದೂ ಆರೋಗ್ಯ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?