ಕಂಗನಾ ರನಾವತ್ 
ದೇಶ

ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆ

ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಮುಂಬೈ: ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ರಾಮದಾಸ್​ ಅಠಾವಳೆ ಅವರು ಗುರುವಾರ ಮುಂಬೈನಲ್ಲಿ ಕಂಗನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಬಗ್ಗೆ ಮಾತನಾಡಿರುವ ಸಚಿವರು, ಸುಮಾರು 1 ಗಂಟೆ ಅವರೊಂದಿಗೆ ಮಾತನಾಡಿ. ಮುಂಬೈನಲ್ಲಿ ಇರಲು ಯಾವುದೇ ಭಯವಿಟ್ಟುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮುಂಬೈ ದೇಶದ ಆರ್ಥಿಕ ರಾಜಧಾನಿ ಮತ್ತು ಇಲ್ಲಿ ವಾಸಿಸಲು ಎಲ್ಲರಿಗೂ ಹಕ್ಕಿದೆ ಎಂದು ಸಚಿವರು, ನಮ್ಮ ಆರ್​ಪಿಐ (ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ) ಪಕ್ಷವು ಸದಾ ನಿಮಗೆ ಬೆಂಬಲವಾಗಿರಲಿದೆ ಎಂದು ಹೇಳಿದರು.

ಕಚೇರಿ ನೆಲಸಮ ಘಟನೆಯಿಂದ ಕಂಗನಾಗೆ ಅವಮಾನ ಆಗಿದೆಯಂತೆ. ಕಳೆದ ಜನವರಿಯಲ್ಲಷ್ಟೇ ನಿರ್ಮಿಸಿದ ಅವರ ಕಚೇರಿ ಇದೀಗ ಹಾನಿಯಾಗಿದೆ. ಕಟ್ಟಡ ನಿರ್ಮಾಣಕಾರರು 2-3 ಇಂಚು ಹೆಚ್ಚಿನ ಜಾಗದಲ್ಲಿ ನಿರ್ಮಿಸಿದ್ದಾರೆಂಬುದು ಅವರಿಗೆ ತಿಳಿದಿರಲಿಲ್ಲವಂತೆ. ಅಕ್ರಮ ಭಾಗವನ್ನು ಮಾತ್ರ ಬಿಎಂಸಿ ನೆಲಸಮ ಮಾಡಬೇಕಿತ್ತು. ಆದರೆ, ಕಚೇರಿ ಒಳಗಿನ ಗೋಡೆ ಮತ್ತು ಫರ್ನಿಚರ್​ಗಳಿಗೂ ಹಾನಿಯಾಗಿವೆ. ಈ ಬಗ್ಗೆ ಕಂಗನಾ ನ್ಯಾಯಾಲಯ ಮೆಟ್ಟಿಲೇರಲಿದ್ದು, ಪರಿಹಾರಕ್ಕಾಗಿ ಬೇಡಿಕೆ ಇಡಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ