ಸ್ವಾಮಿ ಅಗ್ನಿವೇಶ್ 
ದೇಶ

ದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ನಿಧನ

ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 80 ವರ್ಷದ ಸ್ವಾಮಿ ಅಗ್ನಿವೇಶ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲ ದಿನಗಳಿಂದ ಗಂಭೀರವಾಗಿತ್ತು. ಹೀಗಾಗಿ ಕಳೆದ ಮಂಗಳವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಧಾರ್ಮಿಕ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಅಗ್ನಿವೇಶ್ ಅವರು ಸೆಪ್ಟೆಂಬರ್ 21, 1939ರಂದು ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಜನಿಸಿದ್ದರು. ಅವರು ಹರಿಯಾಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆರ್ಯ ಸಮಾಜದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT