ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಏರುತ್ತಲೇ ಇದೆ ಕೊರೋನಾ ಅಬ್ಬರ: ಮತ್ತೆ ದೇಶದಲ್ಲಿ 96,551 ಕೇಸ್ ಪತ್ತೆ, 45 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 96,551 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 45 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 96,551 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 45 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ದೇಶದಲ್ಲಿ 24 ಗಂಟೆಗಳಲ್ಲಿ 96,551 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಸೋಂಕಿತರ ಸಂಖ್ಯೆ 45,62,415ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 1,209 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ  76,271ಕ್ಕೆ ತಲುಪಿದೆ. 

ಇನ್ನು 45,62,415 ಮಂದಿ ಸೋಂಕಿತರ ಪೈಕಿ ಒಟ್ಟಾರೆ 35,42,664 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶಲ್ಲಿನ್ನೂ 9,43,480 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇದೇ ವೇಳೆ ಮಹಾರಾಷ್ಟ್ರದಲ್ಲಿ 23,446 ಜನರಿಗೆ ಸೋಂಕು, 495 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಆಂಧ್ರಪ್ರದವೇಶ 10175 (68 ಸಾವು), ಕರ್ನಾಟಕ 9217 (129 ಸಾವು), ಉತ್ತರಪ್ರದೇಶ 6988 (94 ಸಾವು), ತಮಿಳುನಾಡಿನಲ್ಲಿ 5568 ಮಂದಿಗೆ ಸೋಂಕು ಹಬ್ಬಿದ್ದರೆ, 65 ಮಂದಿಯನ್ನು ಈ ವ್ಯಾಧಿ ಬಲಿಪಡೆದುಕೊಂಡಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 11,63,542 ಕೋವಿಡ್ ಪರೀಕ್ಷೆ, ಒಟ್ಟಾರೆ 5,40,97,975 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,63,542 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,63,542 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.6ರವರೆಗೂ 5,40,97,975 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ