ದೇಶ

ಭಾರತದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ: ಕೇಂದ್ರ ಸರ್ಕಾರ

Manjula VN

ನವದೆಹಲಿ: ಭಾರತದಲ್ಲಿ ಒಟ್ಟಾರೆ 46,59,985 ಸೋಂಕಿತರ ಪೈಕಿ ಶೇ.77.65ರಷ್ಟು ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವಾಲಯ, ಭಾರತದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟಾರೆ ಚೇತರಿಕೆ ಪ್ರಮಾಣ ಶೇ.77.65ರಷ್ಟಿದೆ ಎಂದು ತಿಳಿಸಿದೆ. ಇದರೊಂದಿಗೆ ಸಕ್ರಿಯ ಪ್ರಕರಣಶ ಶೇಕಡಾವಾರು ಶೇ.20.7ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಚೇತರಿಸಿಕೊಂಡ ಪ್ರಕರಣಗಳ ಶೇಕಡಾವಾರು ಮತ್ತು ಸಕ್ರಿಯ ಪ್ರಕರಣಗಳ ಶೇಕಡಾವಾರು ನಡುವಿನ ಅಂತರವು ಕ್ರಮೇಣ ಹೆಚ್ಚಾಗುತ್ತಲೇ ಇದ್ದು. ದೇಶದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರಂದು ತಿಳಿಸಿದೆ. 

ಕೇಂದ್ರ ಸರ್ಕಾರ ನೇತೃತ್ವದ ಕೊರೋನಾ ನಿರ್ವಹಣಾ ತಂತ್ರಗಳು ವ್ಯಾಪಕವಾಗಿದ್ದು, ಆಕ್ರಮಣಕಾರಿ ಪರೀಕ್ಷೆಯ ಮೂಲಕ ಆರಂಭಿಕ ಹಂತದಲ್ಲಿಯೇ ಸೋಂಕು ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ. ಆಸ್ಪತ್ರೆಗಳಲ್ಲಿನ ಗುಣಮಟ್ಟದ ಹಾಗೂ ಪರಿಣಾಮಕಾರಿ ಚಿಕಿತ್ಸೆ ಮತ್ತು ಐಸೋಲೇಷನ್ ವ್ಯವಸ್ಥೆಗಳು ದೇಶದಲ್ಲಿ ಮರಣ ಪ್ರಮಾಣವನ್ನು ಕಡಿಮೆ ಮಾಡುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

SCROLL FOR NEXT