ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.
ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.
ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗೆ ಅಮೆರಿಕಕ್ಕೆ ತೆರಳಿದ್ದು, ಪುತ್ರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸೋನಿಯಾ ಅವರೊಂದಿಗೆ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸೂಕ್ತ ಚಿಕಿತ್ಸೆ ಬಳಿಕ ಸೋನಿಯಾ-ರಾಹುಲ್ ಇಬ್ಬರೂ ಭಾರತಕ್ಕೆ ಮರಳಿ ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಸೋನಿಯಾ ಎರಡು ವಾರಗಳ ಕಾಲ ಅಮೆರಿಕದಲ್ಲೇ ಇರಲಿದ್ದು, ರಾಹುಲ್ ಕೇವಲ ಒಂದೇ ವಾರದಲ್ಲಿ ಮರಳಿ ಭಾರತಕ್ಕೆ ಬರಲಿದ್ದಾರೆ. ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳಲು ರಾಹುಲ್ ಬೇಗ ಮರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೊರೋನಾ ವೈರಸ್ ಹಾವಳಿಯಿಂದಾಗಿ ಸೋನಿಯಾ ಗಾಂಧಿ ಅವರ ನಿಯಮಿತ ಆರೋಗ್ಯ ತಪಾಸಣೆ ವಿಳಂಬವಾಗಿದ್ದು, ಇದೀಗ ಅಮೆರಿಕಕ್ಕೆ ತೆರಳಿ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.