ಹರಿವಂಶ್ ನಾರಾಯಣ್ ಸಿಂಗ್ 
ದೇಶ

ರಾಜ್ಯಸಭಾ ಉಪಾಧ್ಯಕ್ಷ ಹುದ್ದೆ: ಜೆಡಿಯು ಅಭ್ಯರ್ಥಿ ಹರಿವಂಶ್ ಗೆ ಬಿಜೆಡಿ ಬೆಂಬಲ

ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ ನಂತರ, ರಾಜ್ಯಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿದ ನಂತರ, ರಾಜ್ಯಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ನಿತೀಶ್ ಕುಮಾರ್ ಅವರು ದೂರವಾಣಿ ಮೂಲಕ ತಮ್ಮೊಂದಿಗೆ ಮಾತನಾಡಿದ ನಂತರ ನವೀನ್ ಪಟ್ನಾಯಕ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ನಿತೀಶ್ ಕುಮಾರ್ ಅವರು ನವೀನ್ ಪಟ್ನಾಯಕ್ ಅವರಿಗೆ ಸೆಪ್ಟೆಂಬರ್ 10 ರಂದು ಕರೆ ಮಾಡಿದ್ದರು ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹುದ್ದೆಗೆ ಜೆಡಿಯು ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದ್ದರು. 

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ಹಾಜರಾಗುವಂತೆ ಬಿಜೆಡಿ ತನ್ನ ರಾಜ್ಯಸಭಾ ಸದಸ್ಯರಿಗೆ  ವಿಪ್ ನೀಡಿತ್ತು. ರಾಜ್ಯಸಭೆಯಲ್ಲಿ ಬಿಜೆಡಿಗೆ ಒಂಬತ್ತು ಸದಸ್ಯರನ್ನು ಹೊಂದಿದೆ.

2018 ರಲ್ಲಿ ನಡೆದ ರಾಜ್ಯಸಭಾ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಡಿ ಹರಿವಂಶ್ ಅವರನ್ನು ಬೆಂಬಲಿಸಿತ್ತು. ರಾಜ್ಯಸಭಾ ಉಪಾಧ್ಯಕ್ಷರಾಗಿರುವ ಹರಿವಂಶ್ ಅವರ ಅವಧಿ ಈ ವರ್ಷದ ಏಪ್ರಿಲ್ 9 ರಂದು ಮುಕ್ತಾಯಗೊಂಡಿದ್ದು, ಅಂದಿನಿಂದ ಈ ಹುದ್ದೆ ಖಾಲಿಯಾಗಿದೆ. ಈಗ ಹರಿವಂಶ್ ಅವರು ಮತ್ತೆ ರಾಜ್ಯಸಭೆ ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದು, ಅವರ ವಿರುದ್ಧ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಭ್ಯರ್ಥಿ ಮನೋಜ್ .ಜಾ ಅವರು ಸ್ಪರ್ಧಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!