ಕಂಗನಾ ರಾನಾವತ್ 
ದೇಶ

ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ: ಕಾಂಗ್ರೆಸ್ 

ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ ಎಂದು ಕಾಂಗ್ರೆಸ್ ಹೇಳಿದೆ. 

ನವದೆಹಲಿ: ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ ಎಂದು ಕಾಂಗ್ರೆಸ್ ಹೇಳಿದೆ. 

ಬಾಲಿವುಡ್ ನಟಿ ಕಂಗನಾ ರಣಾವತ್  ಮುಂಬೈ ನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಕಂಗನಾ ಹೆಸರು ಉಲ್ಲೇಖಿಸದೇ ಮುಂಬೈ ಮಹಾರಾಷ್ಟ್ರ ಹಾಗೂ ದೇಶದ ಹೆಮ್ಮೆ. ಇಂತಹ ನಗರವನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡುವುದು ಅಪಚಾರ ಎಂದು ಎಐಸಿಸಿ ಕಾರ್ಯದರ್ಶಿ ಆಶೀಶ್ ದುವಾ ಟ್ವೀಟ್ ಮಾಡಿದ್ದಾರೆ. 

ಕಂಗನಾ ತಮಗೆ ಅನ್ಯಾಯವಾಗಿರುವುದರ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ದೂರು ಸಲ್ಲಿಸಿದ್ದರು. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಜ್ಯಪಾಲರ ಕಚೇರಿ ರಾಜಕಾರಣ ನಡೆಸಲು ಇರುವುದಲ್ಲ ಎಂದು ಹೇಳಿದ್ದಾರೆ. 

ಮುಂಬೈ ನಗರ ಲಕ್ಷಾಂತರ ಜನರ ಕನಸನ್ನು ತಾರತಮ್ಯ ಇಲ್ಲದೇ ನನಸಾಗಿಸಿರುವ ನಗರವಾಗಿದೆ. ಇದನ್ನು ಕೀಳಾಗಿ ಚಿತ್ರಿಸಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಕೆ ಮಾಡಕೂಡದು ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿ ಜನತೆಯನ್ನು ಪ್ರಾದೇಶಿಕ ಆಧಾರದಲ್ಲಿ ಒಡೆಯುವುದನ್ನು ನಿಲ್ಲಿಸಬೇಕು ಎಂದು ಆಶೀಶ್ ದುವಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!