ಸಾಂದರ್ಭಿಕ ಚಿತ್ರ 
ದೇಶ

ಯುಜಿಸಿ-ನೆಟ್ ಪರೀಕ್ಷೆ ಸೆಪ್ಟೆಂಬರ್ 24ಕ್ಕೆ ಮುಂದೂಡಿಕೆ

ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್‌)ಯ ಪರೀಕ್ಷೆಯ ದಿನದಂದೇ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್‌)ಯ ದಿನಾಂಕ ನಿಗದಿಯಾಗಿರುವುದರಿಂದ, ನೆಟ್‌ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಮುಂದೂಡಿದೆ.

ನವದೆಹಲಿ: ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್‌)ಯ ಪರೀಕ್ಷೆಯ ದಿನದಂದೇ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್‌)ಯ ದಿನಾಂಕ ನಿಗದಿಯಾಗಿರುವುದರಿಂದ, ನೆಟ್‌ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಮುಂದೂಡಿದೆ.

ಈ ಹಿಂದೆ ಸೆಪ್ಟೆಂಬರ್ 16ರಿಂದ 25ರವರೆಗೆ ನೆಟ್‌ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಈ ಪರೀಕ್ಷೆಯನ್ನು ಸೆಪ್ಟೆಂಬರ್ 24ರಿಂದ ಆರಂಭಿಸಲು ಎನ್‌ಟಿಎ ನಿರ್ಧರಿಸಿದೆ.

‘ಐಸಿಎಆರ್‌ ಪರೀಕ್ಷೆಗಳನ್ನು ಸೆ16ರಿಂದ 23ರವರೆಗೆ ಎನ್‌ಟಿಎ ನಡೆಸಲಿದೆ. ಈ ಕಾರಣದಿಂದಾಗಿ ಸೆ.24ರಿಂದ ಯುಜಿಸಿ–ನೆಟ್‌ 2020ರ ಪರೀಕ್ಷೆಗಳು ಆರಂಭವಾಗಲಿವೆ’ ಎಂದು ಎನ್‌ಟಿಎ ಹಿರಿಯ ನಿರ್ದೇಶಕಿ ಸಾಧನಾ ಪರಶಾರ್‌ ಹೇಳಿದ್ದಾರೆ.

ಶೀಘ್ರದಲ್ಲೇ ವಿಷಯವಾರು ದಿನಾಂಕ, ಅವಧಿಯನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೂನ್‌ನಲ್ಲಿ ನಡೆಯಬೇಕಿದ್ದ ನೆಟ್ ಪರೀಕ್ಷೆಯನ್ನು ಲಾಕ್‌ಡೌನ್ ಕಾರಣದಿಂದಾಗಿ ಎನ್‌ಟಿಎ ಮುಂದೂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel