ಸುಶಾಂತ್ ಸಿಂಗ್ ರಜಪೂತ್ 
ದೇಶ

ಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಬೇಕು ಎಂದು ಕೋರಿ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಬೇಕು ಎಂದು ಕೋರಿ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿಗೆ ತಡೆ ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ ಮೂರನೇ ಅರ್ಜಿ ಇದಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ನೇತೃತ್ವದ ಪೀಠ, ಈಗಾಗಲೇ ಎರಡು ಮನವಿಗಳನ್ನು ಆಲಿಸಲಾಗಿದೆ. ಒಂದು ಪುಣೆ ಮೂಲದ ಚಲನಚಿತ್ರ ನಿರ್ಮಾಪಕ ನಿಲೇಶ್ ನವಲಖಾ ಮತ್ತು ಇನ್ನಿಬ್ಬರು ಸಲ್ಲಿಸಿದ್ದಾರೆ. ಅಲ್ಲದೆ ರಾಜ್ಯದ ಎಂಟು ಮಾಜಿ ಪೊಲೀಸ್ ಅಧಿಕಾರಿಗಳು ಸಹ ಈ ಸಂಬಂಧ ಒಂದು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ನ್ಯಾಯಾಲಯವು ಈ ಮೂವರು ಮನವಿಗಳನ್ನು ಒಟ್ಟಿಗೆ ಟ್ಯಾಗ್, ಅಕ್ಟೋಬರ್ 8 ರಂದು ವಿಚಾರಣೆ ನಿಗದಿಪಡಿಸಿದೆ ಮತ್ತು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

'ಇನ್ ಪರ್ಸ್ಯೂಟ್ ಆಫ್ ಜಸ್ಟೀಸ್' ಎಂಬ ಎನ್ ಜಿಒ ಸಲ್ಲಿಸಿದ ಇತ್ತೀಚಿನ ಅರ್ಜಿಯಲ್ಲಿ, ಪ್ರಕರಣವೊಂದರಲ್ಲಿ ಎಫ್ಐಆರ್ ದಾಖಲಾದ ಸಮಯದಿಂದ ನ್ಯಾಯದ ಆಡಳಿತಕ್ಕೆ ಅಡ್ಡಿಯುಂಟುಮಾಡುವ ಯಾವುದೇ ಅಡೆತಡೆಗಳನ್ನು ಉಂಟು ಮಾಡುವುದು ನ್ಯಾಯಾಲಯವು ಕಂಟೆಪ್ಟ್ ಆಫ್ ಕೋರ್ಟ್ ಕಾಯ್ದೆಯ ವ್ಯಾಪ್ತಿಗೆ ವಿಸ್ತರಿಸಬೇಕು ಎಂದು ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!