ಸಂಗ್ರಹ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 83,809 ಹೊಸ ಸೋಂಕು ಪ್ರಕರಣಗಳು ಪತ್ತೆ, 1,054 ಸಾವು!

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,054 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,054 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 83,809 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 49,30,237ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟಾರೆ 38,59,400 ಮಂದಿ ಸೋಂಕಿತರು  ಗುಣಮುಖರಾಗಿದ್ದಾರೆ.

ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 1,054 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,90,061 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಶೇ.1.64ಕ್ಕೆ ಕುಸಿದ ಕೊರೋನಾ ಮರಣ ಪ್ರಮಾಣ
ಇನ್ನು ದೇಶದಲ್ಲಿನ ಕೊರೋನಾ ಮರಣ ಪ್ರಮಾಣ ಶೇ.1.64ಕ್ಕೆ ಕುಸಿತಗೊಂಡಿದ್ದು, ಜಗತ್ತಿನ ಯಾವುದೇ ದೇಶಕ್ಕೆ ಹೊಲಿಸಿದರೂ ಭಾರತದ ಪ್ರಮಾಣ ಪ್ರಮಾಣ ಕಡಿಮೆ ಇದೆ. ಇದನ್ನು ಶೇ.1ಕ್ಕಿಂತ ಕಡಿಮೆ ತರುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಸಂಬಂಧ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು  ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ಜಾಗತಿಕ ಕೊರೋನಾ ಸೋಂಕು ಮರಣ ಪ್ರಮಾಣ ಸರಾಸರಿ ಶೇ.3.2ರಷ್ಟಿದೆ.

24 ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 10,72,845 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 5,83,12,273 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!