ವೆಂಕಯ್ಯ ನಾಯ್ಡು 
ದೇಶ

ಕೋವಿಡ್‌ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಸಿಕೊಳ್ಳಿ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ

ಕೋವಿಡ್ 19 ಸಾಂಕ್ರಾಮಿಕದ ವಿರುದ್ಧ ಹೋರಾಟಕ್ಕಾಗಿ ಜನರು ಆಯುರ್ವೇದದ ಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.

ನವದೆಹಲಿ: ಕೋವಿಡ್ 19 ಸಾಂಕ್ರಾಮಿಕದ ವಿರುದ್ಧ ಹೋರಾಟಕ್ಕಾಗಿ ಜನರು ಆಯುರ್ವೇದದ ಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.

ಸಿಐಐ ಏರ್ಪಡಿಸಿದ್ದ 'ರೋಗನಿರೋಧಕತೆಗಾಗಿ ಆಯುರ್ವೇದ' ಘೋಷಣೆಯ ಆನ್ ಲೈನ್ ಜಾಗತಿಕ ಆಯುರ್ವೇದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಆಯುರ್ವೇದ ದೇಹದಲ್ಲಿ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆಯುರ್ವೇದ ಕೇವಲ ಒಂದು ವ್ಯವಸ್ಥೆಯಲ್ಲ, ಬದಲಿಗೆ ಜೀವನದ ಸಿದ್ಧಾಂತ. ಆಯುರ್ವೇದ ನಿಸರ್ಗದ ಭಾಗವಾಗಿದ್ದು,ಜನರು ಅದರೊಂದಿಗೆ ಸಹಬಾಳ್ವೆಯಿಂದ ಬಾಳಬೇಕು ಎಂದರು. 

ಆಯುರ್ವೇದ ದೇಹದ ತ್ರಿದೋಷಗಳು ಮತ್ತು ನೈಸರ್ಗಿಕ ಅಂಶಗಳ ನಡುವೆ ಪರಿಪೂರ್ಣ ಸಮಾನತೆ ಕಾಪಾಡಿಕೊಳ್ಳಲು ನೆರವಾಗುತ್ತದೆ. ಆದ್ದರಿಂದ ಜನರು ಹೆಚ್ಚಾಗಿ ಆಯುರ್ವೇದ ಬಳಸಿಕೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು