ದೇಶ

ನೀವು ಲೆಕ್ಕ ಮಾಡಿಲ್ಲ ಅಂದ್ರೆ ಯಾರೂ ಸತ್ತಿಲ್ಲವೇ?: ವಲಸಿಗರ ಸಾವು ಕುರಿತು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

Shilpa D

ನವದೆಹಲಿ: ಲಾಕ್‌ಡೌನ್‌ ಅವಧಿಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವಿಗೀಡಾದರು ಅಥವಾ ಎಷ್ಟು ಮಂದಿ ಕೆಲಸ ಕಳೆದು ಕೊಂಡರು ಎಂಬುದು ಮೋದಿ ಸರ್ಕಾರಕ್ಕೆ ತಿಳಿದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

18 ದಿನಗಳ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿರುವ ಮಾರ್ಚ್‌ನಲ್ಲಿ ಶುರುವಾದ ಲಾಕ್‌ಡೌನ್‌ ಅವಧಿಯಲ್ಲಿ ಮೃತಪಟ್ಟ ವಲಸೆ ಕಾರ್ಮಿಕರ ಮಾಹಿತಿಯು ಕೇಂದ್ರದ ಬಳಿ ಇಲ್ಲ ಎಂದು ಕೇಂದ್ರದ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವಾರ್‌ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಅದರ ಸಂಬಂಧ ರಾಹುಲ್‌ ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

'ನೀವು ಲೆಕ್ಕ ಮಾಡಿಲ್ಲ, ಅಂದರೆ ಯಾರೂ ಸತ್ತಿಲ್ಲ? ದುರದೃಷ್ಟವೆಂದರೆ ಇದರಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ವಲಸೆ ಕಾರ್ಮಿಕರು ಮೃತಪಟ್ಟಿದ್ದನ್ನು ಇಡೀ ಜಗತ್ತು ನೋಡಿದೆ, ಆದರೆ ಮೋದಿ ಸರ್ಕಾರಕ್ಕೆ ಯಾವುದರ ಅರಿವೂ ಇಲ್ಲ' ಎಂದು ಟೀಕಿಸಿದ್ದಾರೆ.

ಕೋವಿಡ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವ ಬಗ್ಗೆ ಸರ್ಕಾರದಿಂದ ಪರಿಶೀಲನೆ ನಡೆದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಸಚಿವ ಗಂಗ್ವಾರ್‌ ಉತ್ತರಿಸಿದ್ದಾರೆ. ಸಾವಿಗೀಡಾಗಿರುವ ವಲಸೆ ಕಾರ್ಮಿಕ ಲೆಕ್ಕ ಇಲ್ಲದ ಕಾರಣ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಅಥವಾ ಆರ್ಥಿಕ ಸಹಕಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದೂ ತಿಳಿಸಿದ್ದಾರೆ.

SCROLL FOR NEXT