ದೇಶ

ನೂತನ ಸಂಸತ್ ಕಟ್ಟಡ ನಿರ್ಮಾಣ ಬಿಡ್ ಗೆದ್ದ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್: ಅಧಿಕಾರಿಗಳು

Vishwanath S

ನವದೆಹಲಿ: 861.90 ಕೋಟಿ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸುವ ಯೋಜನೆಯನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ ಅಂಡ್ ಟಿ ಲಿಮಿಟೆಡ್ 865 ಕೋಟಿ ರೂ.ಗಳ ಬಿಡ್ ಸಲ್ಲಿಸಿತ್ತು ಎಂದು ಅವರು ಹೇಳಿದರು.

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಹೊಸ ಸಂಸತ್ತು ಕಟ್ಟಡವನ್ನು ನಿರ್ಮಿಸುವ ಒಪ್ಪಂದವನ್ನು ಪಡೆದುಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಸಂಸತ್ತಿನ ಕಟ್ಟಡವನ್ನು ಈಗಿರುವ ಕಟ್ಟಡಕ್ಕೆ ಹತ್ತಿರದಲ್ಲಿ ನಿರ್ಮಿಸಲಾಗುತ್ತದೆ. ಇನ್ನು ಇದು 21 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು. 

ಕೇಂದ್ರ ಲೋಕೋಪಯೋಗಿ ಇಲಾಖೆ(ಸಿಪಿಡಬ್ಲ್ಯುಡಿ) ಪ್ರಕಾರ, ಹೊಸ ಕಟ್ಟಡವು ಪಾರ್ಲಿಮೆಂಟ್ ಹೌಸ್ ಎಸ್ಟೇಟ್ ನಲ್ಲಿ ನಿರ್ಮಾಣವಾಗಲಿದೆ. ಯೋಜನೆಯನ್ನು ಕಾರ್ಯಗತಗೊಳಿಸಿದ ಸಂಪೂರ್ಣ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಂಸತ್ತಿನ ಕಟ್ಟಡವು ಮುಂದುವರಿಯುತ್ತದೆ ಎಂದು ಸಿಪಿಡಬ್ಲ್ಯೂಡಿ ಹೇಳಿದೆ.

SCROLL FOR NEXT