ಸಂಗ್ರಹ ಚಿತ್ರ 
ದೇಶ

ಶ್ರೀನಗರದಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

ಶ್ರೀನಗರದ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 

ಕೂಡಲೇ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆಗಳು ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

ಉಗ್ರರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ ಸ್ಥಳೀಯ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಯೋಧರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಸಾವನ್ನಪ್ಪಿದ ಮಹಿಳೆಯಲನ್ನು ಕೊನ್ಸರ್ ರೆಯಾಜ್ ಎಂದುಗುರ್ತಿಸಲಾಗಿದೆ. ಗಾಯಗೊಂಡಿರುವ ಇಬ್ಬರು ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದವರೆದಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?