ದೇಶ

ಕೃಷಿ ಸುಧಾರಣಾ ಮಸೂದೆ ರೈತರ ಆದಾಯ ಹೆಚ್ಚಳಕ್ಕೆ ದಾರಿ, ಕೆಲವು ಶಕ್ತಿಗಳು ದಾರಿತಪ್ಪಿಸಲು ಯತ್ನಿಸುತ್ತಿವೆ: ಮೋದಿ 

Srinivas Rao BV

ನವದೆಹಲಿ: ಕೃಷಿ ಕ್ಷೇತ್ರದ ಎರಡು ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಮಸೂದೆ ಅಂಗೀಕರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

ಪ್ರಸ್ತಾವಿತ ಮಸೂದೆಗಳನ್ನು ಐತಿಹಾಸಿಕ ಎಂದು ಬಣ್ಣಿಸಿದ್ದು ಮಸೂದೆಯಿಂದ ರೈತರಿಗೆ ಲಾಭ ಹೆಚ್ಚಾಗಲಿದೆ. ಆದರೆ ಕೆಲವು ಶಕ್ತಿಗಳು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮೋದಿ ಮಸೂದೆ ವಿರೋಧಿಸುತ್ತಿರುವವರನ್ನು ಟೀಕಿಸಿದ್ದಾರೆ.

ಈ ಮಸೂದೆಗಳು ರೈತರು ಮಧ್ಯವರ್ತಿಗಳಿಂದ ಮುಕ್ತಿಪಡೆಯುವುದಕ್ಕೆ ಸಹಕಾರಿಯಾಗಲಿವೆ ಎಂದು ಮೋದಿ ಹೇಳಿದ್ದಾರೆ. 

ಶಿರೋಮಣಿ ಅಕಾಲಿದಳ ಸೇರಿದಂತೆ ವಿಪಕ್ಷಗಳು ಮಸೂದೆಯನ್ನು ವಿರೋಧಿಸಿವೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಹಲವಾರು ಆಯ್ಕೆಗಳೊಂದಿಗೆ ಕನಿಷ್ಟ ಬೆಂಬಲ ಬೆಲೆ ಹಾಗೂ ಅವರ ಉತ್ಪನ್ನಗಳನ್ನು ಸರ್ಕಾರ ಖರೀದಿಸುವುದು ಎರಡೂ ಮುಂದುವರೆಯಲಿದೆ ಎಂದು ಮೋದಿ ಹೇಳಿದ್ದಾರೆ. 

ಈ ಸುಧಾರಣೆಗಳಿಂದಾಗಿ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ಹೊಸ ಅವಕಾಶಗಳು ದೊರೆಯಲಿದ್ದು, ಅವರ ಆದಾಯದಲ್ಲಿ ಏರಿಕೆಗೆ ದಾರಿ ಮಾಡಿಕೊಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ. ಮಸೂದೆಗಳಿಗೆ ಸಂಬಂಧಿಸಿದಂತೆ ನಡೆಯುವ ಚರ್ಚೆಗಳಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಗಳನ್ನು ಕೇಳುವಂತೆ ರೈತರಿಗೆ ಮೋದಿ ಸಲಹೆ ನೀಡಿದ್ದಾರೆ. 

SCROLL FOR NEXT