ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ 
ದೇಶ

2021ರ ಆರಂಭದಲ್ಲಿ ಕೊರೊನಾ ಲಸಿಕೆ ಬರುವ ನಿರೀಕ್ಷೆಯಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್

ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿ ಹೋಗುವಂತೆ ಮಾಡಿದ್ದು, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಭಾರತದಲ್ಲಿ ಪ್ರತೀನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. 

ನವದೆಹಲಿ: ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿ ಹೋಗುವಂತೆ ಮಾಡಿದ್ದು, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಭಾರತದಲ್ಲಿ ಪ್ರತೀನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಲಸಿಕೆ ಕಂಡು ಹಿಡಿಯಲು ಸಂಶೋಧನೆಗಳೂ ಕೂಡ ತೀವ್ರಗೊಂಡಿದ್ದು, ಬಹುತೇಕ ರಾಷ್ಟ್ರಗಳು ಸತತ ಯತ್ನಗಳನ್ನು ನಡೆಸುತ್ತಿದ್ದು, ಇದೇ ವೇಳೆ ಭಾರತದಲ್ಲಿ ಲಸಿಕೆ ಬಿಡುಗಡೆ ಕುರಿತು ಕೇಂದ್ರ ಸರ್ಕಾರ ಮಹತ್ವದ ಸುಳಿವು ನೀಡಿದೆ. 

ಈಗಾಗಲೇ ದೇಶದಲ್ಲಿ ಕೊರೋನಾ ಸೋಂಕು ಸಂಖ್ಯೆ 51 ಲಕ್ಷ ಗಡಿದಾಟಿದ್ದುಸ ಸಾವಿನ ಸಂಖ್ಯೆ ಕೂಡ 83 ಸಾವಿರ ಗಡಿ ದಾಟಿದೆ. ಕೊರೋನಾ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ದೇಶದ ಜನತೆ ಇದೀಗ ಲಸಿಕೆಗಾಗಿ ಎದುರು ನೋಡುತ್ತಿದ್ದಾರೆ. 

ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ರಾಜ್ಯಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. 

ಲಸಿಕೆ ಕಂಡು ಹಿಡಿಯಲು ಇತರೆ ರಾಷ್ಟ್ರಗಳಂತೆ ಭಾರತ ಕೂಡ ಸತತ ಪ್ರಯತ್ನಗಳನ್ನು ನಡೆಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ತಜ್ಞರ ತಂಡ ಸಂಶೋಧನೆ ನಡೆಸುತ್ತಿದೆ. ನಮ್ಮಲ್ಲಿ ಸುಧಾರಿತ ಯೋಜನೆಗಳಿದ್ದು, ಮುಂದಿನ ವರ್ಷದ ಆರಂಬದ ವೇಳೆಗೆ ಭಾರತದಲ್ಲಿ ಲಸಿಕೆ ಲಭ್ಯವಾಗುವ ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT