ದೇಶ

ಪ್ರಧಾನಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆ

Nagaraja AB

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ 70ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸರ್ಕಾರದ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಲೋಕತಾಂತ್ರಿಕ ಪರಂಪರೆಯಲ್ಲಿ ನಿಷ್ಠೆ, ಆದರ್ಶವನ್ನು ಪ್ರಸುತ್ತಪಡಿಸಿದ್ದೀರಿ.  ರಾಷ್ಟ್ರವು ನಿಮ್ಮ ಅಮೂಲ್ಯವಾದ ಸೇವೆಗಳನ್ನು ಪಡೆಯುತ್ತಲೇ ಇರಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ನರೇಂದ್ರ ಮೋದಿ ಅವರಿಗೆ ಜನ್ಮ ದಿನದ ಶುಭಾಯಶಯ ಕೋರಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಜೀ ಹುಟ್ಟುಹಬ್ಬದ ಶುಭಾಯಶಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಅವರಿಗೆ ಧೀರ್ಘ ಆರೋಗ್ಯವಂತರಾಗಿ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

 ನವಭಾರತ ನಿರ್ಮಾಣದ ನಿಟ್ಟಿನಲ್ಲಿ ದೃಢಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ತಮಗೆ ದೇವರು ಮತ್ತಷ್ಟು ಶಕ್ತಿಯನ್ನು, ಉತ್ತಮ ಆರೋಗ್ಯವನ್ನು ಹಾಗು ದೀರ್ಘಾಯುಷ್ಯವನ್ನು ನೀಡಲಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
SCROLL FOR NEXT